spot_img
spot_img

ಗೋಕಾಕ ಪ್ರವಾಹ ಸಂತ್ರಸ್ತರ ಭೇಟಿ ಮಾಡಿದ ಮುಖ್ಯಮಂತ್ರಿ

Must Read

- Advertisement -

ಗೋಕಾಕ: ಪ್ರವಾಹದಿಂದ ಹಾನಿಗೊಳಗಾದ ಅರಭಾವಿ ಮತಕ್ಷೇತ್ರದ ರೈತರಿಗೆ ಮತ್ತು ಸಾರ್ವಜನಿಕರಿಗೆ ಅಗತ್ಯವಿರುವ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದರು.

ಸೋಮವಾರದಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಕ್ಷೇತ್ರದ ಸುಮಾರು 30 ಗ್ರಾಮಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ವಿವರಿಸಿದರು.

ಘಟಪ್ರಭಾ ನದಿಗೆ ಬಂದ ಭಾರೀ ಪ್ರವಾಹದಿಂದ ನಮ್ಮ ಕ್ಷೇತ್ರದ ನದಿ ತೀರದ ಲೋಳಸೂರು, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಬೀರನಗಡ್ಡಿ, ಹುಣಶ್ಯಾಳ ಪಿ.ಜಿ. ವಡೇರಹಟ್ಟಿ, ಫುಲಗಡ್ಡಿ, ಮುಸಗುಪ್ಪಿ, ಧರ್ಮಟ್ಟಿ, ಪಟಗುಂದಿ, ಕಮಲದಿನ್ನಿ, ರಂಗಾಪೂರ, ಮುನ್ಯಾಳ, ಅಡಿಬಟ್ಟಿ, ಚಿಗಡೊಳ್ಳಿ, ಮೆಳವಂಕಿ, ಕಲಾರಕೊಪ್ಪ, ಹಡಗಿನಾಳ, ಉದಗಟ್ಟಿ, ತಳಕಟ್ನಾಳ, ತಿಗಡಿ, ಸುಣಧೋಳಿ, ಬೈರನಟ್ಟಿ, ಹುಣಶ್ಯಾಳ ಪಿ.ವಾಯ್. ಬೀಸನಕೊಪ್ಪ, ಢವಳೇಶ್ವರ, ಅರಳಿಮಟ್ಟಿ, ಅವರಾದಿ, ಗ್ರಾಮಗಳಲ್ಲಿ ಭಾಗಶಃ ಹಾಗೂ ಕೆಲವೊಂದು ಗ್ರಾಮಗಳು ಜಲಾವೃತಗೊಂಡಿವೆ. ಇದರಿಂದ ಸಾರ್ವಜನಿಕರು ಮತ್ತು ರೈತರಿಗೆ ತುಂಬಾ ಹಾನಿಯಾಗಿದೆ ಎಂದು ಅವರು ವಿವರಿಸಿದರು.

- Advertisement -

ಪ್ರವಾಹ ಪೀಡಿತ ಗ್ರಾಮಗಳ ರೈತರ ಜಮೀನುಗಳ ಬೆಳೆಗಳು ಪ್ರವಾಹದಿಂದ ಭಾರಿ ಪ್ರಮಾಣದಲ್ಲಿ ಹಾನಿಯಾಗಿವೆ. ಕೂಡಲೇ ಬೆಳೆಗಳ ಹಾನಿ ಬಗ್ಗೆ ಸಮೀಕ್ಷೆ ಮಾಡಿಸಿ ರೈತರಿಗೆ ಬೆಳೆ ಪರಿಹಾರ ನೀಡಬೇಕು. ಪ್ರವಾಹ ಪೀಡಿತ ಗ್ರಾಮಗಳಲ್ಲಿ ವಾಸಿಸುವ ಸಾರ್ವಜನಿಕರ ಮನೆಗಳಿಗೆ ನೀರು ನುಗ್ಗಿದ್ದರಿಂದ ಮನೆಗಳನ್ನು ಬಿಟ್ಟು ಕಾಳಜಿ ಕೇಂದ್ರಗಳಿಗೆ ಹೋದ ಕುಟುಂಬಗಳಿಗೆ ಕೂಡಲೇ ಪರಿಹಾರ ನೀಡಬೇಕು. ನಿರಂತರ ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರ ಕುಟುಂಬಗಳ ಮನೆಗಳ ನಿರ್ಮಾಣಕ್ಕೆ ಪರಿಹಾರ ನೀಡಬೇಕು. ಪ್ರತಿ ವರ್ಷವೂ ಘಟಪ್ರಭಾ ನದಿಗೆ ಪ್ರವಾಹ ಬರುತ್ತಿರುವುದರಿಂದ ನದಿ ತೀರದ ಗ್ರಾಮಗಳ ಸ್ಥಳಾಂತರಕ್ಕೆ ಸರ್ಕಾರವು ನಿವೇಶನ ಗುರುತಿಸಿ ಅವರುಗಳಿಗೆ ಶಾಶ್ವತ ಪರಿಹಾರವನ್ನು ಕಲ್ಪಿಸಿಕೊಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ, ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಹಿರಿಯರು ಕುಟುಂಬದ ಬಲವಾದ ಅಡಿಪಾಯ — ಸಿದ್ದಲಿಂಗ ಕಿಣಗಿ

    ಸಿಂದಗಿ - ಅಜ್ಜಿಯರು ಕುಟುಂಬದ ದೊಡ್ಡ ಸಂಪತ್ತು, ಪ್ರೀತಿಯ ಪರಂಪರೆಯ ಸ್ಥಾಪಕರು, ಶ್ರೇಷ್ಠ ಕಥೆಗಾರರು ಮತ್ತು ಸಂಪ್ರದಾಯದ ಪಾಲಕರು. ಅಜ್ಜ-ಅಜ್ಜಿಯರು ಕುಟುಂಬದ ಬಲವಾದ...
- Advertisement -

More Articles Like This

- Advertisement -
close
error: Content is protected !!
Join WhatsApp Group