spot_img
spot_img

ವಿಜಯ ಸಂಕಲ್ಪ ಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ- ರಮೇಶ ಭೂಸನೂರ

Must Read

spot_img
- Advertisement -

ಸಿಂದಗಿ: ರಾಜ್ಯಾದ್ಯಂತ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಐಕ್ಯತಾ ಸ್ಥಳವಾದ  ನಂದಗಡದಿಂದ ಪ್ರಾರಂಭಗೊಂಡ ರಾಜ್ಯದ ಎರಡನೇ ಹಂತದ ವಿಜಯ ಸಂಕಲ್ಪ ಯಾತ್ರೆಯನ್ನು ರಾಜ್ಯದ ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಅವರು ಚಾಲನೆ ನೀಡುವರು.

ಅದರ ಭಾಗವಾಗಿ ಮಾ. 11 ರಂದು ಬೆಳಿಗ್ಗೆ ಬೃಹತ್ ರೋಡ್ ಶೋ ಗಾಗಿ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿದೆ ಕಾರಣ ಭಾರತೀಯ ಜನತಾ ಪಕ್ಷ ದ ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಶಾಸಕ ರಮೇಶ ಭೂಸನೂರ ಮನವಿ ಮಾಡಿದರು.

ಪಟ್ಟಣದ ಬಿಜೆಪಿ ಕಾಯಾಲಯದಲ್ಲಿ  ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಸವೇಶ್ವರ ವೃತ್ತದಿಂದ ಪ್ರಾರಂಭವಾಗಿ ವಿವೇಕಾನಂದ ವೃತ್ತದ ಮಾರ್ಗವಾಗಿ ಜಗದ್ಗುರು ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳ ರಸ್ತೆಯ ಮಾರ್ಗವಾಗಿ ಟಿಪ್ಪು ಸುಲ್ತಾನ ವೃತ್ತ, ಡಾ.ಬಿ.ಆರ್.ಅಂಬೇಡ್ಕರ ವೃತ್ತದ ವರೆಗೆ ಬೃಹತ್ ರೋಡ್ ಶೋ ನಡೆಯುತ್ತದೆ ಈ ರೋಡ್ ಶೋ ನಲ್ಲಿ ಕೇಂದ್ರ ಮಂತ್ರಿಗಳಾದ ರಾಜ್ಯದ ಸಹ ಉಸ್ತುವಾರಿ ಕಿಸನ್ ರಡ್ಡಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬೃಹತ್ ಕೈಗಾರಿಕಾ ಸಚಿವ ಮುರಗೇಶ ನಿರಾಣಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವರಾದ ರಮೇಶ ಜಾರಕಿಹೊಳಿ, ಸಿ.ಸಿ.ಪಾಟೀಲ, ಶಶಿಕಲಾ ಜೊಲ್ಲೆ, ಬೈರತಿ ಬಸವರಾಜ, ಶಿವರಾಂ ಹೆಬ್ಬಾರ, ಹಾಗೂ ಶಾಸಕ ಮಿತ್ರರಾದ ಅನಿಲ ಬೆನಕೆ, ಪಿ.ರಾಜೀವ, ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಸೇರಿದಂತೆ ರಾಜ್ಯದ ಹಲವು ಮುಖಂಡರು ಹಾಗೂ ಜಿಲ್ಲೆಯ ಎಲ್ಲ ಭಾರತೀಯ ಜನತಾ ಪಕ್ಷದ ಶಾಸಕರು ಹಾಗೂ ಸಂಸದರು ಪಕ್ಷದ ಪ್ರಮುಖರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

- Advertisement -

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ.ಡಿ.ಕುಂಬಾರ  ಮಾತನಾಡಿದರು.


ಅಲ್ಪಸಂಖ್ಯಾತರು ನನ್ನೊಂದಿಗೆ ಇದ್ದಾರೆ. ಅವರು ನನಗೆ ಓಟ್ ಹಾಕಿಲ್ಲವೆಂದು ಬಸನಗೌಡ್ರು ಹೇಳಿದ್ದಾರೆ ಯಾವ ಅರ್ಥಕ್ಕೆ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಅಲ್ಪ ಸಂಖ್ಯಾತರು ನನ್ನ ಕೈ ಹಿಡಿದಿದ್ದಾರೆ. 

-ಶಾಸಕ ರಮೇಶ ಭೂಸನೂರ


- Advertisement -

ಈ ಪತ್ರಿಕಾಗೋಷ್ಠಿಯಲ್ಲಿ ವಕ್ತಾರ ರಾಜಶೇಖರ ಪೂಜಾರಿ, ಜಿಪಂ ಮಾಜಿ ಉಪಾಧ್ಯಕ್ಷ  ಸಿದ್ದರಾಮ ಪಾಟೀಲ ಹೊನ್ನಳ್ಳಿ, ಅರವಿಂದ ಕನ್ನೂರ ವಕೀಲರು, ಬಿ.ಎಚ್.ಬಿರಾದಾರ, ಚಂದ್ರಶೇಖರ ಅಮಲಿಹಾಳ, ಮಾಧ್ಯಮ ಪ್ರತಿನಿಧಿ ಶಿವಕುಮಾರ ಬಿರಾದಾರ, ಶ್ರೀಶೈಲ ಪರಗೊಂಡ ಇದ್ದರು.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group