7 ನೇ ವೇತನ ಆಯೋಗಕ್ಕೆ ಹಣ ಮೀಸಲಿಡಲು ಬದ್ಧ, ಧರಣಿ ಕೈ ಬಿಡಿ – ಮುಖ್ಯಮಂತ್ರಿ

Must Read

ಕಲಬುರ್ಗಿ – ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರು ಮುಷ್ಕರ ನಡೆಸಬಾರದು. ರಾಜ್ಯದ ಜನರ ಹಿತ ದೃಷ್ಟಿಯಿಂದ ಸರ್ಕಾರದೊಂದಿಗೆ ಸಹಕರಿಸಬೇಕು. ನಾನು ನೀಡಿದ ಮಾತಿನಂತೆ 7ನೇ ವೇತನ ಆಯೋಗ ರಚಿಸಿದ್ದು, ನೌಕರರ ಸಂಘದ ಬೇಡಿಕೆ ಈಡೇರಿಸಿದ್ದೇನೆ. ವೇತನ ಆಯೋಗದ ಅಧ್ಯಕ್ಷರು ಮಧ್ಯಂತರ ವರದಿ ನೀಡಿದರೆ ಹಣ ಮೀಸಲಿಡಲು ಸಿದ್ಧವಿದ್ದೇವೆ. ಮೊದಲು ವರದಿ ಬರಲಿ, ನೌಕರರ ಸಂಘದವರು ಸ್ವಲ್ಪ ತಾಳ್ಮೆಯಿಂದ ಇದ್ದರೆ ಎಲ್ಲವೂ ಸರಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಲಬುರ್ಗಿಯಲ್ಲಿ ಗುಲ್ಬರ್ಗ ವಿವಿಯಲ್ಲಿ ರವಿವಾರ ರಾತ್ರಿ ಮುಕ್ತಾಯಗೊಂಡ ಕಲ್ಯಾಣ ಕರ್ನಾಟಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಅಗತ್ಯವಿರುವ ಹಣ ನೀಡಲಾಗುವುದು ಎಂದು ಭರವಸೆ ನೀಡಿದರು.

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಇದೇ ಮಾರ್ಚ್ ಒಂದರಿಂದ ಅನಿರ್ಧಿಷ್ಟಾವಧಿ ಧರಣಿ ಕೈಗೊಳ್ಳಲು ಸರ್ಕಾರಿ ನೌಕರರು ನಿರ್ಧರಿಸಿರುವ ಬೆನ್ನಲ್ಲೆ ಮುಖ್ಯಮಂತ್ರಿಗಳು ಈ ಭರವಸೆ ನೀಡಿದ್ದು ಸರ್ಕಾರಿ ನೌಕರರ ಸಂಘ ಹಾಗೂ ನೌಕರರು ಯಾವ ಸ್ಪಂದಿಸುವರೋ ಕಾದು ನೋಡಬೇಕು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group