spot_img
spot_img

ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Must Read

spot_img

ಸಿಂದಗಿ: ವಿದ್ಯಾರ್ಥಿಗಳು ತಮ್ಮ ಸಾಧನೆಗೆ ಯಾವುದೇ ತೆರನಾದ ನ್ಯೂನತೆಗಳನ್ನು ನೆಪಮಾಡದೆ ನಿಖರವಾದ ಗುರಿ ಹೊಂದಿ ಮತ್ತು ಸೂಕ್ತ ಮಾರ್ಗದರ್ಶನ ಪಡೆದುಕೊಂಡರೆ ತಾವು ಯಾವುದೆ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬಹುದು ಎಂದು. ಜಿ.ಪಿ.ಪೋರವಾಲ ಕಾಲೇಜಿನ ಪ್ರಾಧ್ಯಾಪಕ ಡಾ.ಆರ್.ಎಮ್.ಪಾಟೀಲ ಹೇಳಿದರು.

ಪಟ್ಟಣದ ತಾ.ಶಿ.ಪ್ರ ಮಂಡಳಿ ಸಿ.ಎಮ್. ಮನಗೂಳಿ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಮತ್ತು ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಹಿರಿಯ ಪ್ರಾಧ್ಯಾಪಕ ಡಾ. ಜೆ.ಜಿ.ಜೋಶಿ ಮಾತನಾಡಿ,  ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ಕೀಳರಿಮೆ ಭಾವನೆ ಹೊಂದದೆ, ತಾವು ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡು ಸೂಕ್ತ ಪಥದಲ್ಲಿ ಸಾಗಿದ್ದೇಯಾದರೆ. ತಾವು ಕೂಡಾ ಸ್ವಾಮಿ ವಿವೇಕಾನಂದ, ಡಾ.ಬಿ.ಆರ್. ಅಂಬೇಡ್ಕರ್, ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ರಂತೆ ತಾವು ಆಯ್ದುಕೊಂಡ ಕ್ಷೇತ್ರದಲ್ಲಿ ದಿಗ್ವಿಜಯ ಸಾಧಿಸಬಹುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೋ.ಎಮ್.ಜಿ.ಬಿರಾದಾರ ಮಾತನಾಡಿ, ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ದೇಹ ಸದೃಢತೆ ಬೆಳೆಯುದರ ಜೊತೆಗೆ ಆರೋಗ್ಯಪೂರ್ಣ ಜೀವನ ಸಾಗಿಸಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ನಂತರ ವಿದ್ಯಾರ್ಥಿ/ನಿಯರಿಂದ ಸಾಂಸ್ಕೃತಿಕ ಮತ್ತು ಮನರಂಜನೆ ಚಟುವಟಿಕೆ ಜರುಗಿತು.

ಪ್ರೋ.ಜಿ.ಜಿ. ಕಾಂಬಳೆ ನಿರೂಪಿಸಿದರು. ಡಾ. ಅಂಬರೀಷ ಬಿರಾದಾರ ಸ್ವಾಗತಿಸಿ ಪರಿಚಯಿಸಿದರು. ಪ್ರೊ.ರಾಹುಲ ಕಾಂಬಳೆ ವರದಿ ವಾಚನ ಮಾಡಿದರು ಕುಮಾರಿ.ಅಶ್ವಿನಿ ಕೋರೆ ವಂದಿಸಿದರು.

ಸಮಾರಂಭದಲ್ಲಿ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿವೃಂದ ಪಾಲ್ಗೋಂಡಿದ್ದರು.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!