- Advertisement -
ಮೈಸೂರು ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕ ಪ್ರೊ.ಭಾಷ್ಯಂ ಸ್ವಾಮೀಜಿಯವರು ಇತ್ತೀಚೆಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ಪದವಿಗೆ ನಾಮಾಂಕಿತರಾದ ಸಂದರ್ಭದಲ್ಲಿ ಅವರ ಅಭಿಮಾನಿಗಳು ಕ್ರಾಫರ್ಡ್ ಹಾಲ್ ಮುಂದೆ ಫಲತಾಂಬೂಲ ನೀಡಿ ಅಭಿನಂದಿಸಿದರು.
ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್, ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಶಾಖಾ ಮಠ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ವ್ಯವಸ್ಥಾಪಕ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್), ಗಿರೀಶ್, ಕುಮಾರ್ ಹಾಗೂ ಇತರರನ್ನು ಕಾಣಬಹುದು.