spot_img
spot_img

ಸರ್ಕಾರಿ ನೌಕರರಿಂದ ಸರ್ಕಾರಕ್ಕೆ ಅಭಿನಂದನೆ

Must Read

- Advertisement -

ಸಿಂದಗಿ: ರಾಜ್ಯ ಸರಕಾರಿ ನೌಕರರಿಗೆ 10.25% ರಷ್ಟು ತುಟ್ಟಿ ಭತ್ಯೆಯನ್ನು ನೀಡಿರುವುದಕ್ಕೆ ಹಾಗೂ ರಾಜ್ಯ ಸರಕಾರಿ ನೌಕರರ ಹಲವು ವರ್ಷಗಳ ಬೇಡಿಕೆಯಾದ ರಾಜ್ಯ ಸರಕಾರಿ ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುತ್ತಿರುವ ರಾಜ್ಯ ಸರಕಾರಕ್ಕೆ ಸಿಂದಗಿ ತಾಲೂಕಿನ ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ ಹಾಗೂ ಆಲಮೇಲ ತಾಲೂಕಾ ಅಧ್ಯಕ್ಷ ರವಿ ಬಿರಾದಾರ ಹಾಗೂ ದೇವರಹಿಪ್ಪರಗಿ ತಾಲೂಕ ಅಧ್ಯಕ್ಷ ಎಂ.ಜಿ.ಯಂಕಂಚಿ ಹಾಗೂ ಎಲ್ಲ ಮೂರು ತಾಲೂಕಿನ ಪದಾಧಿಕಾರಿಗಳು ಹಾಗೂ ನೌಕರರಸ್ಥರು ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರಕಾರಿ ನೌಕರ ಬೇಡಿಕೆಗಳಲ್ಲಿ ಪ್ರಮುಖವಾದ ತುಟ್ಟಿ ಭತ್ಯೆಯನ್ನು ಹಾಗೂ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲು ಶ್ರಮವಹಿಸಿದ ರಾಜ್ಯ ಸರಕಾರಿ ನೌಕರರ ಸಂಘದ ಕ್ರಿಯಾಶೀಲ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹಾಗೂ ಮಹಾಪ್ರಧಾನ ಕಾರ್ಯದರ್ಶಿ ಜಗದೀಶಗೌಡ ಪಾಟೀಲ ಅವರಿಗೆ ಹಾಗೂ ಸಹಕರಿಸಿದ ಎಲ್ಲ ಅಧಿಕಾರಿಗಳಿಗೂ ಮತ್ತು ಎಲ್ಲ ಜಿಲ್ಲೆಯ ಅಧ್ಯಕ್ಷರಿಗೂ ಹಾಗೂ ಎಲ್ಲ ತಾಲೂಕಾ ಅಧ್ಯಕ್ಷರಿಗಳಿಗೂ ಕೂಡಾ ಸಿಂದಗಿ ತಾಲೂಕಿನ ರಾಜ್ಯ ಸರಕಾರಿ ನೌಕರರ ಸಂಘವು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

- Advertisement -
- Advertisement -

Latest News

ಸ್ವಾಮಿ ವಿವೇಕಾನಂದರ ಬೆಳಗಾವಿ ಭೇಟಿಯ ಸ್ಮಾರಕ ಭವನ

ಬೆಳಗಾವಿ- ಭಾರತದ ಶೂರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರು ಸನ್ ೧೮೯೨ ರಲ್ಲಿ ಕರ್ನಾಟಕದ ಬೆಳಗಾವಿಗೆ ಭೇಟಿ ಕೊಟ್ಟು ಅಕ್ಟೋಬರ್ ೧೬ ರಿಂದ ೨೭ ರ...
- Advertisement -

More Articles Like This

- Advertisement -
close
error: Content is protected !!
Join WhatsApp Group