spot_img
spot_img

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ದೇಶವ್ಯಾಪಿ ಸಾಂಕೇತಿಕ ಪ್ರತಿಭಟನೆಗೆ ಕರೆ

Must Read

spot_img
- Advertisement -

ಹೊಸದಿಲ್ಲಿ: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ಜೂನ್ 11ಕ್ಕೆ ದೇಶಾಧ್ಯಂತ ಸಾಂಕೇತಿಕ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಹಲವಾರು ರಾಜ್ಯಗಳಲ್ಲಿ ಇಂಧನ ಬೆಲೆಗಳು ಈಗಾಗಲೇ 100 ರೂ. ಗಡಿ ದಾಟಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷವು ಬೀದಿಗಿಳಿಯಲು ನಿರ್ಧರಿಸಿದೆ. ಪಕ್ಷದ ಎಲ್ಲ ರಾಜ್ಯ ಘಟಕಗಳಿಗೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವಂತೆ ಸೂಚಿಸಿವೆ.

ಸಾರ್ವಜನಿಕ ಲೂಟಿ ಮತ್ತು ಬೆಲೆ ಏರಿಕೆ ವಿರುದ್ಧ ತುರ್ತಾಗಿ ಪ್ರತಿಭಟಿಸಲು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್, ರಾಜ್ಯ ಘಟಕಗಳಿಗೆ ಸೂಚಿಸಿದ್ದಾರೆ. ಸಾಂಕೇತಿಕ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಕೇಂದ್ರದ ಜನವಿರೋಧಿ ನೀತಿ ವಿರುದ್ಧ ಅಭಿಯಾನ:

- Advertisement -

ಸಾಂಕ್ರಾಮಿಕ ರೋಗ, ಆರ್ಥಿಕ ಕುಸಿತ, ನಿರುದ್ಯೋಗ, ವೇತನ ಕಡಿತ, ಉದ್ಯೋಗ ಕಡಿತದಿಂದಾಗಿ ಸಂಕಷ್ಟದಲ್ಲಿರುವ ಜನರ ಮೇಲೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳ ಅನಿಯಂತ್ರಿತ ಏರಿಕೆಯು ಬಲವಾದ ಹೊಡೆತ ನೀಡಿದೆ.

ಈ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಲು ಅಭಿಯಾನ ನಡೆಸುವಂತೆಯೂ ಸೂಚಿಸಿದ್ದಾರೆ.ಪೆಟ್ರೋಲ್ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಅದರ ಪರಿಣಾಮ ಎಲ್ಲ ಗೃಹಪಯೋಗಿ ಹಾಗೂ ಅಗತ್ಯ ವಸ್ತುಗಳ ಮೇಲೆ ಬೀರಿದೆ.

ಅನೇಕ ರಾಜ್ಯಗಳಲ್ಲಿ ಈಗಾಗಲೇ ಬೆಲೆ 100 ರೂ. ದಾಟಿದೆ.ಕಳೆದ ಒಂದು ತಿಂಗಳಿನಿಂದಲೂ ಇಂಧನ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದ್ದು, ಈಗ ಗರಿಷ್ಠ ಮಟ್ಟವನ್ನು ತಲುಪಿದೆ.

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group