೨೫ ಸಾವಿರ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ – ಈಶ್ವರ ಖಂಡ್ರೆ ವಿಶ್ವಾಸ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಸಿಂದಗಿ: ಮಾಜಿ ಸಚಿವ ದಿ.ಎಮ್.ಸಿ.ಮನಗೂಳಿ ಅವರ ನಿಧನದಿಂದ ನಡೆಯುತ್ತಿರುವ ಈ ಉಪ ಚುನಾವಣೆಯಲ್ಲಿ ಮನಗೂಳಿ ಅವರಂತಹ ಸರಳ ವ್ಯಕ್ತಿತ್ವ ಹಾಗೂ ಅವರ ರಾಜಕೀಯ ಅನುಭವವನ್ನು ಅವರ ಮಗ ಅಶೋಕ ಮನಗೂಳಿಯಲ್ಲಿ ನಾವು ಕಂಡಿದ್ದೇವೆ ತಂದೆಗೆ ತಕ್ಕ ಮಗನಾಗಿ ತಂದೆಯಂತೆಯೇ ಜನ ಸೇವೆ ಮಾಡುತ್ತಾನೆ ಎಂಬ ಉದ್ದೇಶದಿಂದ ಈ ಬಾರಿಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಮ್ಮತದಿಂದ ಆಯ್ಕೆ ಮಾಡಿದ್ದೇವೆ ಆ ಕಾರಣಕ್ಕೆ ಕಾಂಗ್ರೆಸ್ ಅಭ್ಯರ್ಥಿ 25 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸುತ್ತಾರೆ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಕಾಂಗ್ರೆಸ ಸಮಿತಿ ಕಾರ್ಯಾಲಯದಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಉಪ ಚುನಾವಣೆ ನಿಮಿತ್ತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉಪ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ನೊಂದವರ, ಶೋಷಿತರ, ದಲಿತರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣವನ್ನು ದೇಶದಲ್ಲಿ ಅಭಿವೃದ್ದಿ ಮಾಡಿದ ಪಕ್ಷ ಇದ್ದರೆ ಅದು ಕಾಂಗ್ರೆಸ್ ಮಾತ್ರ. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಆಡಳಿತವನ್ನು ಜನ ಸಂಪೂರ್ಣ ತಿರಸ್ಕಾರ ಮಾಡುತ್ತಿದ್ದಾರೆ.

ಬಡವರ ಬದುಕಿನೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ದಿನ ನಿತ್ಯದ ಬಳಕೆಯ ವಸ್ತುಗಳು, ತೈಲದಂಥ ಅನೇಕ ಅವಶ್ಯಕ ವಸ್ತುಗಳ ಬೆಲೆ ಗಗನಕ್ಕೆ ಏರಿದೆ ಏನಿದು ವ್ಯವಸ್ಥೆ. ಕೊರೋನಾದಿಂದ ಸಂಕಷ್ಟ ಪಡುತ್ತಿರುವ ಜನತೆಗೆ ಇದು ಗಾಯದ ಮೇಲೆ ಬರೆ ಹಾಕಿದಂತಾಗಿದೆ. ತೈಲ ಬೆಲೆ ಏರಿಕೆಯ ವಿರುದ್ದ ದೇಶ ವ್ಯಾಪಿ ಕಾಂಗ್ರೆಸ್ ಪ್ರತಿಭಟನೆ ಮಾಡಿದರೂ ಕೇಂದ್ರ ಸರಕಾರ ಕ್ಯಾರೆ ಎನ್ನುತ್ತಿಲ್ಲ ಎಂದು ದೂರಿದರು.

- Advertisement -

ರೈತ ವಿರೋಧಿಯಾಗಿ ಕೇಂದ್ರ ಕಾರ್ಯ ಮಾಡುತ್ತಿದೆ. ಮಹಿಳೆಯರು ತಮ್ಮ ನಿತ್ಯದ ಬದುಕಿನ ಅವಶ್ಯಕವಾಗಿರುವ ಬೆಲೆ ಏರಿಕೆ ಕಂಡು ಮಮ್ಮಲ ಮರಗುತ್ತಿದ್ದಾರೆ ಇದರಿಂದ ಕೇಂದ್ರಕ್ಕೆ ಹಿಡಿ ಶಾಪ ಹಾಕುತ್ತಿರುವುದು ಸಾಮಾನ್ಯವಾಗಿದೆ. ರಾಜ್ಯ ಸರ್ಕಾರ ಕೊರೋನಾ ಮುಂದಿಟ್ಟು ಭ್ರಷ್ಟಾಚಾರ ಕ್ಕೆ ಇಳಿದಿದ್ದಾರೆ.

ವರ್ಗಾವಣೆ ದಂಧೆಯಂತು ಹೇಳತೀರದು. ಯೋಗ್ಯ ಆಡಳಿತ ನಡೆಸುವದಕ್ಕೆ ಬಿಜೆಪಿಗೆ ಯಾವ ನೈತಿಕತೆ ಇಲ್ಲದಂತಾಗಿದೆ. ಕಲ್ಯಾಣ ಕರ್ನಾಟಕವನ್ನು ಮತ್ತು ಉತ್ತರ ಕರ್ನಾಟಕವನ್ನು ರಾಜ್ಯ ಸರ್ಕಾರ ಅನೇಕ ವಿಚಾರಗಳಲ್ಲಿ ಅನ್ಯಾಯ ಮಾಡುತ್ತಲೆ ಬಂದಿದೆ. ಕಾಂಗ್ರೆಸ್ ಆಡಳಿತದಲ್ಲಿನ ಎಲ್ಲ ಯೋಜನೆಗಳನ್ನು ನೀಡದೇ ಅದರ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ ಬಿಜೆಪಿ ಪಕ್ಷಕ್ಕೆ ದುರಾಡಳಿತಕ್ಕೆ ಈ ಬಾರಿ ಮತದಾರ ತಕ್ಕ ಪಾಠ ಕಲಿಸಲಿದ್ದಾರೆ.

ಬೆಲೆ ಏರಿಕೆ , ನಿರುದ್ಯೋಗ , ರೈತ ವಿರೋಧಿ ನೀತಿ , ಕೋವಿಡ್ ಸಮಯದಲ್ಲಿ ಸರಕಾರದ ಭ್ರಷ್ಟಾಚಾರ ಹಲವಾರು ಸಮಸ್ಯೆಗಳಿಗೆ ತಕ್ಕ ಉತ್ತರ ಈ ಉಪ ಚುನಾವಣೆಯಲ್ಲಿ ತೋರಿಸುತ್ತೇವೆ ಎಂದು ಹೇಳಿದರು.ಈ ಬಾರಿ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರುಗಳು ಒಗ್ಗಟ್ಟಾಗಿ ಉಪ ಚುನಾವಣೆ ಎದುರಿಸುತ್ತೇವೆ ಅಂತೆಯೇ ಸಿಂದಗಿ ಮತ್ತು ಹಾನಗಲ್ ಮತಕ್ಷೇತ್ರದಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಸ್ಥಳೀಯ ನಾಯಕರ ಜೊತೆ ಸಮಾಲೋಚನೆ ನಡೆಸಿ ಯಾವುದೇ ಭಿನ್ನಮತವಿಲ್ಲದೆ ಅಶೋಕ ಮನಗೂಳಿಯವರನ್ನು ಒಮ್ಮತ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ.

ಇದೇ ದಿನಾಂಕ 8 ರಂದು ರಾಜ್ಯ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಸೇರಿದಂತೆ ಹಲವರ ನೇತೃತ್ವದಲ್ಲಿ ನಾಮ ಪತ್ರ ಸಲ್ಲಿಸುತ್ತೇವೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಈ ಸಭೆಗೆ ಮಾಜಿ ಶಾಸಕ ಶರಣಪ್ಪ ಸುಣಗಾರ ಮತ್ತು ಉದ್ಯಮಿ ಎಂ ಆರ್ ಟಿ ಗೈರಾಗಿದ್ದು ಈ ಕುರಿತು ಸಮರ್ಥನೆ ನೀಡಿದ ಶಾಸಕ ಎಂ.ಬಿ.ಪಾಟೀಲ ಯಾವುದೇ ಬಿನ್ನಮತವಿಲ್ಲ ಎಂದು ಸ್ಪಷ್ಟ ಪಡಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಶಾಸಕರಾದ ಎಂ.ಬಿ.ಪಾಟೀಲ, ಯಶವಂತ್ರಾಯಗೌಡ ಪಾಟೀಲ, ಶಿವಾನಂದ ಪಾಟೀಲ, ಸುನೀಲಗೌಡ ಪಾಟೀಲ ಮತ್ತು ಮಾಜಿ ಶಾಸಕ ಸಿ.ಎಸ್.ನಾಡಗೌಡ, ಜಿಲ್ಲಾಧ್ಯಕ್ಷ ರಾಜು ಆಲಗೂರ, ಶರಣಪ್ಪ ವಾರದ, ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ, ತಾಲೂಕಾಧ್ಯಕ್ಷ ವಿಠ್ಠಲ ಕೊಳೂರ, ಹಾಸೀಂಪಿರ ವಾಲೀಕಾರ, ಹಮೀದ ಮುಶ್ರಫ್, ಬಿ.ಎಸ್.ಪಾಟೀಲ ಯಾಳಗಿ, ಆಲಮೇಲ ತಾಲೂಕು ಅಧ್ಯಕ್ಷ ಅಯುಬ ದೇವರಮನಿ, ಇರ್ಫಾನ ಮುಲ್ಲಾ, ಯೋಗಪ್ಪಗೌಡ ಪಾಟೀಲ, ರಾಜಶೇಖರ ಕೂಚಬಾಳ, ಯಲ್ಲು ಕೆರ್ಕಿ, ವಿದ್ಯಾರಾಣಿ ತುಂಗಳ, ರಾಘವೇಂದ್ರ ಪೂಜಾರಿ ಜಿಲ್ಲಾ ಅಂಗಘಟಕಗಳ ಅಧ್ಯಕ್ಷರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!