ಅಧಿಕಾರ ಇಲ್ಲದೆ ಕಾಂಗ್ರೆಸ್ ನವರಿಗೆ ಬದುಕಲು ಆಗುವುದಿಲ್ಲ – ಬಿ ಸಿ ನಾಗೇಶ

Must Read

ಬೀದರ – ಅಧಿಕಾರ ಇಲ್ಲದೆ ಕಾಂಗ್ರೆಸ್ ನವರಿಗೆ ಬದುಕಲು ಆಗುವುದಿಲ್ಲ. ಅದಕ್ಕಾಗಿ ಹತಾಶರಾಗಿ ಆಧಾರರಹಿತವಾಗಿ ಏನೇನೋ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ನಾಗೇಶ ಹೇಳಿದರು

ಭಾಲ್ಕಿ, ಔರಾದ ಹಾಗೂ ಬಸವಕಲ್ಯಾಣದಲ್ಲಿ  ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
ಕಾಂಗ್ರೆಸ್ ಪಕ್ಷ ಫೆ ಪೋಸ್ಟರ್ ಪ್ರತಿಭಟನೆಗೆ ಟಾಂಗ್ ಕೊಟ್ಟ ಶಿಕ್ಷಣ ಸಚಿವ ಬಿ ಸಿ ನಾಗೇಶ್.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ  ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರದ ಅಭಿವೃದ್ಧಿಯನ್ನು  ಸಹಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ನಾಯಕರಿಗೆ ಆಗುತ್ತಿಲ್ಲ. ಕಾಂಗ್ರೆಸ್  ನಾಯಕರ ಹತ್ತಿರ ಭ್ರಷ್ಟಾಚಾರದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಅದನ್ನು ಬಿಟ್ಟು ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಅವರಿಗೆ ಅಧಿಕಾರ ಇಲ್ಲದೆ ಬದುಕಲು ಆಗುವುದಿಲ್ಲ. ಆದ್ದರಿಂದ ಹತಾಶೆಯಿಂದ ಹೀಗೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಿಎಫ್ಐ ಮುಖಂಡರ ಮನೆಗಳ ಮೇಲೆ ಎನ್ಐಎ ಹಾಗು ಇಡೀ ದಾಳಿ ವಿಚಾರ ಪ್ರಸ್ತಾಪಿಸಿದ ನಾಗೇಶ ಅವರು, ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಪಿ ಎಫ್ ಐ ಸಂಘಟನೆಗೆ ಏನು ಮಾಡಬೇಕೆಂದು ಗೊತ್ತು.ಪಿ ಎಫ್ ಐ ಬ್ಯಾನ್ ಮಾಡಬೇಕು ಅಥವಾ ಅದಕ್ಕೆ ಯಾವ ಜಾಗ ತೋರಿಸಬೇಕು ಎಂಬುದು ಗೊತ್ತು ಎಂದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...

More Articles Like This

error: Content is protected !!
Join WhatsApp Group