ಕಾಂಗ್ರೆಸ್ ದಲಿತರಿಗೆ ಮೋಸ ಮಾಡಿದೆ – ಪ್ರಕಾಶ ಖಂಡ್ರೆ

Must Read

ಬೀದರ: ಕಾಂಗ್ರೆಸ್ ಪಕ್ಷವು ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿ ಮೋಸ ಮಾಡಿದೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದ್ದಾರೆ.

ನಗರದಲ್ಲಿ ನಡೆದ ಎಸ್ ಸಿ ಮೋರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಹೊಸ ಬಾಂಬ್ ಸಿಡಿಸಿದರು.

2018 ರಲ್ಲಿ ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿದ ಕಾಂಗ್ರೆಸ್, ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಪಕ್ಷದಿಂದಲೇ  ದಲಿತರಿಗೆ ಅನ್ಯಾಯ ಆಗಿದೆ ಎಂದರು.

ನಮ್ಮ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಅಂಬೇಡ್ಕರ್ ಹುಟ್ಟಿದ ಸ್ಥಳ ಅಭಿವೃದ್ಧಿ ಮಾಡಿದ್ದಾರೆ. ಬಿಜೆಪಿ ಪಕ್ಷ ದಲಿತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group