ಬೀದರ: ಕಾಂಗ್ರೆಸ್ ಪಕ್ಷವು ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿ ಮೋಸ ಮಾಡಿದೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದ್ದಾರೆ.
ನಗರದಲ್ಲಿ ನಡೆದ ಎಸ್ ಸಿ ಮೋರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೊಸ ಬಾಂಬ್ ಸಿಡಿಸಿದರು.
2018 ರಲ್ಲಿ ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿದ ಕಾಂಗ್ರೆಸ್, ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಪಕ್ಷದಿಂದಲೇ ದಲಿತರಿಗೆ ಅನ್ಯಾಯ ಆಗಿದೆ ಎಂದರು.
ನಮ್ಮ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಅಂಬೇಡ್ಕರ್ ಹುಟ್ಟಿದ ಸ್ಥಳ ಅಭಿವೃದ್ಧಿ ಮಾಡಿದ್ದಾರೆ. ಬಿಜೆಪಿ ಪಕ್ಷ ದಲಿತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಹೇಳಿದರು.
ವರದಿ: ನಂದಕುಮಾರ ಕರಂಜೆ, ಬೀದರ