ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ – ವಕ್ತಾರರು

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಸಿಂದಗಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಿದ ರಾಜಶೇಖರ ಕೂಚಬಾಳ, ಮಲ್ಲಿಕಾರ್ಜುನ ಸಾವಳಸಂಗ, ಸಲೀಮ ಕಣ್ಣಿ, ಶಿವಯೋಗಿ ಮೂಡಗಿ ಅವರನ್ನು ವಕ್ತಾರರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಆದೇಶ ಹೊರಡಿಸಿದ್ದು ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದರು.

ಈ ಕುರಿತು ಪಟ್ಟಣದ ಖಾಸಗಿ ಹೊಟೇಲೊಂದರಲ್ಲಿ ನೂತನವಾಗಿ ನೇಮಕವಾದ ಕಾಂಗ್ರೆಸ್ ಪಕ್ಷದ ವಕ್ತಾರರು ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥೀ ಅಶೋಕ ಮನಗೂಳಿ ಅವರ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಕ್ಷೇತ್ರದ ಕಟ್ಟಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪಕ್ಷದ ವರಿಷ್ಠರಿಗೆ ಒಳ್ಳೆಯ ಸಂದೇಶ ನೀಡಿದ್ದಾರೆ. ಇದನ್ನೆಲ್ಲ ಗಮನಿಸಿದರೆ ಈ ಕ್ಷೇತ್ರ ಅಭ್ಯರ್ಥಿ ಕನಿಷ್ಠ ೩೦ ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಎಸಿ ಕಾರಿನಲ್ಲಿ ಬಂದು ಪತ್ರಿಕಾಗೋಷ್ಠಿಯಲ್ಲಿಯು ಕೂಡಾ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸದೇ ಬೇರೆ ಪ್ರಶ್ನೆ ಕೇಳಿ ಎನ್ನುವ ಮಾತನಾಡಿ ಪತ್ರಕರ್ತರಿಗೂ ಅವಮಾನಗೊಳಿಸಿದ್ದಾರೆ ಅಲ್ಲದೆ ಕಾರ್ಯಕ್ರಮಕ್ಕೂ ಮುಂಚೆ ಡಾ. ಬಾಬಾಸಾಹೇಬ ಅಂಬೇಡ್ಕರ ಬಾವಚಿತ್ರಕ್ಕೆ ಮಾಲಾರ್ಪಣೆ ಮಾಡದಿರುವ ನೀತಿಯನ್ನು ಉಗ್ರವಾಗಿ ಖಂಡಿಸುತ್ತೇವೆ. ಕಾಂಗ್ರೆಸ್ ಕಾರ್ಯಕರ್ತರನ್ನು ಸಾವಿರಾರು ಸಂಖ್ಯೆಯ ಬೆಳವಣಿಗೆಗಳು ನೋಡಿದರೆ ಅಭ್ಯರ್ಥಿಯ ಸೋಲಿನ ಸುಳಿವು ಅರ್ಥಮಾಡಿಕೊಂಡು ಬಿಜೆಪಿ ಅಭ್ಯರ್ಥಿ ಸೋಲಿನ ಮುನ್ಸೂಚನೆ ತೋರಿಸಿದಂತಾಗಿದೆ.

- Advertisement -

ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯುವಕರಂತೆ ರೋಡ ಶೋನಲ್ಲಿ ಪಾಲ್ಗೊಂಡು ಎಲ್ಲರ ಮಾತುಗಳನ್ನು ಆಲಿಸಿ ಬಿಜೆಪಿ ಸರಕಾರದಲ್ಲಿ ದೀನದಲಿತರಿಗೆ ಕಡುಬಡವರಿಗೆ ಆದ ನೋವು ತೋಡಿಕೊಂಡು ಮುಂಬರುವ ೨೦೨೩ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ನಿಮ್ಮೆಲ್ಲ ಬೇಡಿಕೆ ಈಡೇರಿಸುತ್ತೇವೆ ಎನ್ನುವ ಸಂದೇಶ ನೀಡಿ ಜನಮನ ಗೆದ್ದಿದ್ದಾರೆ.

ಗ್ರಾಮ ಪಂಚಾಯತಿಗಳಿಗೆ ರೂ ೧ ಕೋಟಿಯ ಆಮಿಷ ಒಡ್ಡಿದ್ದಾರೆ ಎನ್ನುವ ಮಾತುಗಳು ಇಡೀ ಕ್ಷೇತ್ರಾದ್ಯಂತ ಕೇಳಿ ಬರುತ್ತಿವೆ ಇಂತಹ ಎಲ್ಲ ಪ್ರಮಾದಗಳ ಪ್ರಾರಂಭದಿಂದಲೇ ಶುರುವಾಗಿದನ್ನು ಗಮನಿಸಿದರೆ ಬಿಜೆಪಿ ಅಭ್ಯರ್ಥಿಗೆ ಸೋಲಿನ ಭೀತಿ ಶುರುವಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಒಟ್ಟಾರೆ ಸಮ್ಮಿಶ್ರ ಸರಕಾರದಲ್ಲಿ ಮಾಡಿದ ಸಾಧನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತೇವೆ ತಾಲೂಕಾನಾದ್ಯಂತ ಬೇರೆ ಬೇರೆ ಪಕ್ಷಗಳನ್ನು ತೊರೆದು ನೂರಾರು ಸಂಖ್ಯೆಯಲ್ಲಿ ಸೇರ್ಪಡೆಯಾಗುತ್ತಿರುವುದನ್ನು ನೋಡಿದರೆ ಯಾವುದೇ ಆಮೀಷಗಳು ಅಶೋಕ ಮನಗೂಳಿಯವರ ಗೆಲುವಿಗೆ ಅಡ್ಡಿಯಾಗುವುದಿಲ್ಲ ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜಶೇಖರ ಕೂಚಬಾಳ, ಮಲ್ಲಿಕಾರ್ಜುನ ಸಾವಳಸಂಗ, ಸಲೀಮ ಕಣ್ಣಿ, ಶಿವಯೋಗಿ ಮೂಡಗಿ, ಎಸ್ಸಿ ಎಸ್ಟಿ ಘಟಕದ ಅಧ್ಯಕ್ಷ ಪರಶುರಾಮ ಕಾಂಬಳೆ, ಸಂತೋಷ ಹರನಾಳ, ಅಶೋಕ ಬಿಜಾಪುರ, ಸಿದ್ದನಗೌಡ ದೇವರಡ್ಡಿ, ಅಮೀತ ಪವಾರ, ಧರ್ಮರಾಜ ಯಂಟಮಾನ ಸೇರಿದಂತೆ ಹಲವರು ಇದ್ದರು.


ವರದಿ: ಪಂಡಿತ್ ಯಂಪೂರೆ, ಸಿಂದಗಿ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!