ಚಿನ್ನದ ಹೆಸರಿನಲ್ಲಿ ಹಿತ್ತಾಳೆ ನಾಣ್ಯ ಕೊಡುತ್ತಿದೆ ಕಾಂಗ್ರೆಸ್ – ಭಗವಂತ ಖೂಬಾ

Must Read

ಬೀದರ – ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವ ದುರುದ್ದೇಶದಿಂದ ಕಾಂಗ್ರೆಸ್‌ನವರು ಮತದಾರರಿಗೆ ಚಿನ್ನದ ಹೆಸರಲ್ಲಿ ಹಿತ್ತಾಳೆಯ ನಾಣ್ಯ ಕೊಡುತ್ತಿದ್ದಾರೆ. ಮತದಾರರು ಮೋಸ ಹೋಗಬಾರದು ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಸೋಲಿನ ಭಯದಿಂದ ಹತಾಶರಾಗಿ ಕಾಂಗ್ರೆಸ್ ಮುಖಂಡರು ಮತದಾರರಿಗೆ ಬೆದರಿಕೆ ಹಾಕುವ ಕೆಲಸವನ್ನೂ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಅವರು,ಕಾಂಗ್ರೆಸ್‌ನ ಶಾಸಕರೊಬ್ಬರು ಮತದಾರರಿಗೆ ಮತ ತೋರಿಸಿ ಹಾಕುವಂತೆ ಪಂಚಾಯಿತಿ ಸದಸ್ಯರ ಮೇಲೆ ಒತ್ತಡ ಹಾಕುತ್ತಿರುವ ದೂರುಗಳು ಕೇಳಿ ಬರುತ್ತಿವೆ . ಕಾಂಗ್ರೆಸ್ ನಾಯಕರಿಗೆ ಸಂವಿಧಾನ ಗೊತ್ತಿಲ್ಲವೆ ? ಜಿಲ್ಲಾಡಳಿತ ಶಾಂತಿಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಎರಡು ಪ್ರಮುಖ ಪಕ್ಷಗಳ ನಾಯಕರ ಪರಸ್ಪರ ದೋಷಾರೋಪಣೆ ಬೀದಿಗೆ ಬಂದಿದ್ದು ಗಡಿ ಜಿಲ್ಲೆ ಬೀದರ್ ನಲ್ಲಿ ಇಂದು ಕೇಂದ್ರ ಸಚಿವ ಕಾಂಗ್ರೆಸ್ ಪಕ್ಷದ ಮೇಲೆ ಗಂಭೀರ ಆರೋಪ ಮಾಡಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವ ದುರುದ್ದೇಶದಿಂದ ಕಾಂಗ್ರೆಸನವರು ಮತದಾರರಿಗೆ ಚಿನ್ನದ ಹೆಸರಲ್ಲಿ ಹಿತ್ತಾಳೆಯ ನಾಣ್ಯ ಹಂಚುತ್ತಿದ್ದಾರೆ ಎಂದರು.

ಜಿಲ್ಲೆಯಲ್ಲಿ ಚುನಾವಣೆಯಲ್ಲಿ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಕಾಂಗ್ರೆಸ್ ಪಕ್ಷವೆ ನೇರ ಹೊಣೆ ಎಂದು ವಾಗ್ದಾಳಿ ನಡೆಸಿದ ಭಗವಂತ ಖೂಬಾ, ಬರುವ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾದ ಈಶ್ವರ ಖಂಡ್ರೆ ಹಾಗೂ ರಾಜಶೇಖರ ಪಾಟೀಲ ಕಂಪನಿ ಸೋಲಲಿದೆ.ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ.ಮತದಾರರು ನಿರ್ಭಯವಾಗಿ ಗುಪ್ತ ಮತದಾನ ಮಾಡಬೇಕು ಪೊಳ್ಳು ಬೆದರಿಕೆಗೆ ಯಾರೂ ಹೆದರುವ ಅಗತ್ಯ ವಿಲ್ಲ ಬಿಜೆಪಿ ಸರ್ಕಾರ ಮತದಾರರ ರಕ್ಷಣೆಗೆ ನಿಲ್ಲಲಿದೆ ಎಂದು ಅಭಯ ನೀಡಿದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group