spot_img
spot_img

ಕಾಂಗ್ರೆಸ್ ಪಕ್ಷವು ಧರ್ಮವನ್ನು ಜನರಲ್ಲಿ ಬಿತ್ತುತ್ತಿದೆ-  ಅಶೋಕ್ ಮನಗೂಳಿ

Must Read

- Advertisement -

ಸಿಂದಗಿ: ಈ ಲೋಕಸಭಾ ಚುನಾವಣೆಯು ಕಾಂಗ್ರೆಸ್ ಹಾಗೂ ಬಿಜೆಪಿಯ ಮಧ್ಯೆ ನಡೆಯುತ್ತಿರುವ ಚುನಾವಣೆ ಅಲ್ಲ… ಇದು ಧರ್ಮ.. ಅಧರ್ಮದ ಮಧ್ಯೆ ನಡೆಯುತ್ತಿರುವ ಚುನಾವಣೆ, ಬಿಜೆಪಿ ಪಕ್ಷವು ಅಧರ್ಮವನ್ನು ಸಾರುತ್ತಿದೆ ಆದರೆ ಕಾಂಗ್ರೆಸ್ ಪಕ್ಷವು ಧರ್ಮವನ್ನು ಜನರಲ್ಲಿ ಬಿತ್ತುತಿದೆ ಎಂದು ಶಾಸಕ ಅಶೋಕ ಮನಗೂಳಿ ಅಭಿಮತ ವ್ಯಕ್ತಪಡಿಸಿದರು.

ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ 18ನೇ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ||ಡಿ ಜಿ ಸಾಗರ್ ಬಣ) “ಸಂವಿಧಾನ ಪ್ರಜಾಪ್ರಭುತ್ವ ವಿರೋಧಿ ಕೋಮುವಾದಿ ಪಕ್ಷವನ್ನು ಧಿಕ್ಕರಿಸಿ ಜನ ಪರ ಚಿಂತನೆಯನ್ನು ಹೊಂದಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ” ಎಂದು ಮತದಾರರ ಜಾಗೃತಿ ಕರ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು

ಸಂವಿಧಾನ ಪ್ರಜಾಪ್ರಭುತ್ವ ಡಾ. ಬಿ ಆರ್ ಅಂಬೇಡ್ಕರ್ ಅವರ ಚಿಂತನೆಗಳ ಮೇಲೆ ಕಾಂಗ್ರೆಸ್ ಪಕ್ಷವು ನಿಂತಿದೆ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿಯಲು, ಸಂವಿಧಾನದ ಆಶಯ ಜಾರಿ ಮಾಡಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಆಲಗೂರ ಅವರಿಗೆ ತಮ್ಮ ಮತ ಚಲಾಯಿಸಿ ಗೆಲ್ಲಿಸಿ ತರಬೇಕೆಂದು ಮನವಿ ಮಾಡಿದರು,

- Advertisement -

ಈ ಸಂದರ್ಭದಲ್ಲಿ ದ.ಸಂ.ಸ. ಜಿಲ್ಲಾ ಸಂಚಾಲಕ ವೈ ಸಿ ಮಯೂರ್ ಮಾತನಾಡಿ, ಕರ್ನಾಟಕದ ಸಿದ್ದರಾಮಯ್ಯ ಸರಕಾರ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ, ದುರ್ಬಲ ವರ್ಗಗಳ ಹಿಂದುಳಿದವರ ಮತ್ತು ಅಲ್ಪಸಂಖ್ಯಾತರ ಹಿತ ಕಾಪಾಡುತ್ತಿದೆ. ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ ಕೋಮುವಾದಿ ಪಕ್ಷಗಳನ್ನು ಧಿಕ್ಕರಿಸಿ ಜನಪರ ಚಿಂತನೆಯ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಮತ ಚಲಾವಣೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ದ.ಸಂ.ಸ ತಾ. ಸಂಚಾಲಕರಾದ ಶರಣು ಚಲವಾದಿ, ಸಂಘಟನಾ ಸಂಚಾಲಕರಾದ ನೀಲಕಂಠ ಹೊಸಮನಿ, ಪರಸು ಬ್ಯಾಕೋಡ, ಸಂಘಟನೆಯ ಹಿರಿಯರಾದ ಅಪ್ಪಾರಾಯ ಬಟವಾಲ, ಜೈ ಭೀಮ್ ತಳಕೇರಿ, ಶಿವುಕುಮಾರ ಗಣಿಹಾರ ಸುನೀಲ್ ಸಂಗಟಾಣ, ಸುಧೀರ್ ಬಟವಾಲ, ಹಾಗೂ ನೂರಾರು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕನ್ನಡಕ್ಕಾಗಿ ಇನ್ನೂ ಹೋರಾಡಬೇಕಾಗಿರುವುದು ವಿಷಾದನೀಯ – ಚಂದ್ರಶೇಖರ ಅಕ್ಕಿ

ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಸಂದರ್ಶನ ಮೂಡಲಗಿ - ಬೆಳಗಾವಿ ಜಿಲ್ಲಾ ೧೬ ನೇ ಸಾಹಿತ್ಯ ಸಮ್ಮೇಳನವು ಇದೇ ದಿ. ೨೩ , ೨೪...
- Advertisement -

More Articles Like This

- Advertisement -
close
error: Content is protected !!
Join WhatsApp Group