ಸಿಂದಗಿ: ಕಳೆದ ಮೂರ್ನಾಲ್ಕು ಚುನಾವಣೆಗಳಲ್ಲಿ ಸಿಂದಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕ್ಷೇತ್ರ ವಂಚಿತವಾಗಿದೆ ಕಾರಣ ಹೈಕಮಾಂಡ ಘೋಷಣೆ ಮಾಡಿದ ನಿರ್ಣಯದಂತೆ ನಾವೆಲ್ಲ ಪಕ್ಷದ ಮುಖಂಡರು ಒಗ್ಗಟ್ಟು ಪ್ರದರ್ಶಿಸಿ ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯಗಳನ್ನು ಜನರ ಮುಂದೆ ಇಡುವ ಮೂಲಕ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ್ದಾದರೆ ಕನಿಷ್ಠ 30-40 ಸಾವಿರ ಅಂತರದಿಂದ ಪಕ್ಷದ ಅಭ್ಯರ್ಥಿ ಗೆದ್ದೆ ಗೆಲ್ಲುತ್ತಾರೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ತಾಲೂಕಾಧ್ಯಕ್ಷ ವಿಠ್ಠಲ ಕೊಳ್ಳೂರ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ಕಾಂಗ್ರೆಸ್ ಹೈಕಮಾಂಡ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 2018ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಆಯ್ಕೆಯಾದ ದಿ.ಎಂ.ಸಿ.ಮನಗೂಳಿ ಕ್ಷೇತ್ರದ ಅಭಿವೃದ್ಧಿಗೆ ನೂರೆಂಟು ಯೋಜನೆಗಳನ್ನು ತಂದು ಜನಾನುರಾಗಿಯಾಗಿದ್ದಾರೆ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಕೆಲ ತಿಂಗಳ ಹಿಂದೆ ನಡೆದ ಉಪ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ, ರಾಹುಲ ಗಾಂಧಿ ಅವರ ಆದೇಶದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯನವರು ದಿ. ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು ಚುನಾವಣೆ ಮುಂದಕ್ಕೆ ಹೋಗಿದ್ದರಿಂದ ಮತ್ತೆ ಅದೇ ಅಭ್ಯರ್ಥಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ ಎಲ್ಲ ಭೂತ್ ಮಟ್ಟದ ಕಾರ್ಯಕರ್ತರು ಸೇರಿದಂತೆ ಎಲ್ಲ ಚುನಾಯಿತ ಹಾಗೂ ಮಾಜಿ ಸದಸ್ಯರು, ಕಾಂಗ್ರೆಸ್ ಹಿರಿಯ ಮುಖಂಡರು ಒಗ್ಗಟ್ಟಿನಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯ ಮತ್ತು ತೈಲ ನೀತಿ, ಬಡವರ ವಿರೋಧಿ ಕಾರ್ಯಕ್ರಮಗಳ ಕುರಿತು ಭೂತ ಮಟ್ಟದಲ್ಲಿ ಪ್ರಚಾರ ಕೈಕೊಂಡು ಅಭ್ಯರ್ಥಿ ಗೆಲುವಿಗೆ ಪಣತೋಡಬೇಕು ಒಂದು ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದಾದ್ದಲ್ಲಿ ಅಂತವರಿಗೆ ಪಕ್ಷದ ವತಿಯಿಂದ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಾನು ಒಬ್ಬ ಪಕ್ಷದ ಅಭ್ಯರ್ಥಿ ಆಕಾಂಕ್ಷಿ ಪಟ್ಟಿಯಲ್ಲಿದ್ದೆ ಆದರೆ ಹೈಕಮಾಂಡ ಜಿಲ್ಲೆಯ ಎಲ್ಲ ಮುಖಂಡರ ಹಾಗೂ ಹಿರಿಯರ ಅಭಿಪ್ರಾಯಗಳನ್ನು ಕ್ರೂಢೀಕರಿಸಿ ಅಭ್ಯರ್ಥಿಯನ್ನು ಘೋಷಣೆ ಅದನ್ನು ಸ್ವಾಗತಿಸಬೇಕು. ಕಾಂಗ್ರೆಸ್ ಪಕ್ಷ ಬಹು ವಿಶಾಲತೆ ಹೊಂದಿದೆ ಈ ಕ್ಷೇತ್ರದಲ್ಲಿ 50 ವರ್ಷಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ಸಾವಿರಾರು ಹಳೆಯ ಕಾರ್ಯಕರ್ತರ ಪಡೆಯಿದೆ ಅವರೆಲ್ಲರನ್ನು ಗಮನದಲ್ಲಿ ತೆಗೆದುಕೊಂಡು ಕಾರ್ಯೋನ್ಮುಖರಾಗಬೇಕು ಎಂದು ಘೋಷಿತ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಭ್ಯರ್ಥಿ ಅಶೋಕ ಮನಗೂಳಿ, ಮಲ್ಲಣ್ಣಾ ಸಾಲಿ, ಕೆಪಿಸಿಸಿ ಸದಸ್ಯ ಮುಸ್ತಾಕ ಮುಲ್ಲಾ, ಶಿವನಗೌಡ ಬಿರಾದಾರ, ಎಪಿಎಂಸಿ ಅಧ್ಯಕ್ಷ ಸಿದ್ದಣ್ಣ ಹಿರೇಕುರಬರ, ಯೋಗಪ್ಪಗೌಡ ಪಾಟೀಲ, ಎಂ.ಎ.ಖತೀಬ, ಗುರಣ್ಣಗೌಡ ಬಿರಾದಾರ, ನಿಂಗನಗೌಡ ಪಾಟೀಲ, ಭೀಮರಾಯ ಅಮರಗೋಳ, ಭೀಮಾಶಂಕರ ಬಡಿಗೇರ, ಶಾಂತವೀರ ಬಿರಾದಾರ, ಇರ್ಫಾನ ಮುಲ್ಲಾ, ಇರ್ಫಾನ ಅಳಂದ, ಭೀಮು ವಾಲೀಕಾರ, ಪ್ರಸನ್ ಜೆರಟಗಿ, ಶಫೀ ಜಮಾದಾರ, ನಿಂಗಣ್ಣ ಚಟ್ಟಿ ಸೇರಿದಂತೆ ಅನೇಕರು ಗೋಷ್ಠಿಯಲ್ಲಿ ಇದ್ದರು.