ಬೀದರ – ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಸ್ಪೀಕರ್ ವಿಶ್ವೇಶ್ವರ ಕಾಗೇರಿ ಅವಮಾನಿಸಿದ್ದ ಹಿನ್ನೆಲೆಯಲ್ಲಿ ಬೀದರ ಮತ್ತು ಭಾಲ್ಕಿ ಯಲ್ಲಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಧಿಕ್ಕಾರ ಕೂಗುವ ಮೂಲಕ ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಕಾರ್ಯಾಲಯದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನೆ ಮಾಡಿದರು.
ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡಲೇ ಕ್ಷಮೆ ಯಾಚಿಸಬೇಕು ಮತ್ತು ಸ್ಪೀಕರ್ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ವರದಿ: ನಂದಕುಮಾರ ಕರಂಜೆ, ಬೀದರ