ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ಮಹಾನ್ ನಾಯಕ,ಸಂವಿಧಾನ ಶಿಲ್ಪಿ,ಮಹಾ ಮಾನವತಾವಾದಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಶೃದ್ಧೆ ಭಕ್ತಿಯಿಂದ ಆಚರಿಸಲಾಯಿತು.
ಗ್ರಂಥಾಲಯದಲ್ಲಿ ಸಿಬ್ಬಂದಿ ಮತ್ತು ಓದುಗರು ಅವರಿಗೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಅದೇ ರೀತಿ ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾಡಳಿತ ವತಿಯಿಂದ ಅಂಬೇಡ್ಕರ್ ಗಾರ್ಡನ್ ದಲ್ಲಿ ಡಾ. ಅಂಬೇಡ್ಕರ್ ಜಯಂತಿಯನ್ನು ಆಚರಿಸುವ ನಿಮಿತ್ತ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಬೆಳಗಾವಿ, ವತಿಯಿಂದ ಅಂಬೇಡ್ಕರ್ ಅವರ ಜೀವನ,ಸಾಧನೆ,ಮತ್ತು ಪ್ರೇರಣೆಯ ಬಗ್ಗೆ ಮಾಹಿತಿ ನೀಡುವ ಪುಸ್ತಕಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ಈ ಪುಸ್ತಕ ಪ್ರದರ್ಶನವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಜ್ಯೋತಿ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು.
ಅವರೊಂದಿಗೆ ಪೊಲೀಸ್ ಆಯುಕ್ತರಾದ ಡಾ.ಬೋರಲಿಂಗಯ್ಯ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್ ಅವರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಹರ್ಷಲ್ ಭೋಯರ್ ಅವರು, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಸವರಾಜ ರಾಯವ್ವಗೋಳ ಮತ್ತು ಇನ್ನಿತರ ಅಧಿಕಾರಿಗಳು,ಗಣ್ಯ ಮಾನ್ಯರು ದೀಪ ಬೆಳಗಿಸಿ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು. ನಂತರ ಪುಸ್ತಕ ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ನಗರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯ ಬೆಳಗಾವಿಯ ಎಲ್ಲ ಸಿಬ್ಬಂದಿ, ಸಾರ್ವಜನಿಕರೂ ಹಾಜರಿದ್ದರು.