Homeಸುದ್ದಿಗಳುಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನ ಆಚರಣೆ

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನ ಆಚರಣೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಸಮಾಜ ವಿಜ್ಞಾನ ಶಿಕ್ಷಕರಾದ ಸುನೀಲ ಭಜಂತ್ರಿ ವಿಧ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ, ವಿಶೇಷತೆ, ಜಾರಿಯಾದ ಇತಿಹಾಸ ಇತ್ಯಾದಿಗಳ ಬಗ್ಗೆ ತಿಳಿಸಿಕೊಟ್ಟರು.

ಸಂವಿಧಾನದ ಮೂಲ ಆಶೋತ್ತರಗಳು ಮತ್ತು ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ನಮ್ಮ ಹೆಮ್ಮೆಯ ಸಂವಿಧಾನಕ್ಕೆ ಗೌರವ ಸಲ್ಲಿಸಬೇಕಾಗಿದ್ದು ಭಾರತೀಯರಾದ ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದರು. ಸಂವಿಧಾನದಲ್ಲಿ ಸ್ಪಷ್ಟಪಡಿಸಿದ ಮೂಲಭೂತ ಕರ್ತವ್ಯಗಳನ್ನು ಪಾಲಿಸುವುದರ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಎಲ್ಲರೂ ಕೈ ಜೋಡಿಸೋಣ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

1949 ನವೆಂಬರ 26 ರಂದು ಸಂವಿಧಾನ ಅಂಗೀಕಾರವಾದ ಸವಿನೆನಪಿಗಾಗಿ ಆಚರಿಸಲ್ಪಡುವ ಸಂವಿಧಾನದ ದಿನ ಅಂಗವಾಗಿ ಐಶ್ವರ್ಯ ಕುಲಕರ್ಣಿ ಎಲ್ಲ ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಓದಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶ್ರೀಪಾಲ ಚೌಗಲಾ, ಶಿವಾನಂದ ಬಳಿಗಾರ, ವೀರೇಂದ್ರ ಪಾಟೀಲ, ರೇಖಾ ಸೊರಟೂರ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಸಂವಿಧಾನದ ಕುರಿತಾಗಿ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು.

RELATED ARTICLES

Most Popular

error: Content is protected !!
Join WhatsApp Group