ಕೋರ್ಟ್ ಆದೇಶಕ್ಕೆ ಕಿಮ್ಮತ್ತಿಲ್ಲ; ಬೀದರನಲ್ಲಿ ಮುಂದುವರೆದ ಹಿಜಾಬ್ – ಕೇಸರಿ ಶಾಲು ಸಂಘರ್ಷ

Must Read

ಬೀದರ – ಯಾವುದೇ ಧಾರ್ಮಿಕ ದಿರಿಸನ್ನು ಧರಿಸಿ ಕಾಲೇಜಿಗೆ ಬರಬಾರದು ಎಂದು ಕೋರ್ಟ್ ಆದೇಶವಿದ್ದರೂ ಅದನ್ನು ಪಾಲನೆ ಮಾಡದೇ ಹಿಜಾಬ್ ಧರಿಸಿ ವಿದ್ಯಾರ್ಥಿಗಳು ಕಾಲೇಜ್ ಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಿಂದೂ ವಿದ್ಯಾರ್ಥಿಗಳು ಕೂಡ ಮತ್ತೆ ಕೇಸರಿ ಶಾಲು ಧರಿಸಿ ಆಗಮಿಸಿದ್ದಾರೆ.

ಬೀದರ್ ನ ಹುಮನಾಬಾದ್ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಈ ಘಟನೆ ನಡೆದಿದ್ದು ಬಳಿಕ ಹಿಜಾಬ್ ಹಾಗು ಕೇಸರಿ ಶಾಲು ಧರಿಸಿ‌ ಬಂದ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರ ಕಳುಹಿಸಿ ಕಾಲೇಜಿಗೆ ರಜೆ ನೀಡಲಾಗಿದೆ.

ಹೈಕೋರ್ಟ್ ಆದೇಶದಂತೆ ಮೊದಲು ಹಿಜಾಬ್ ತೆಗೆಯಲು ಪಟ್ಟು ಹಿಡಿದ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿಕೊಂಡು ತರಗತಿಗೆ ಆಗಮಿಸಿದರು ಈ ವೇಳೆ ಕೆಲಹೊತ್ತು ವಿದ್ಯಾರ್ಥಿಗಳು, ಉಪನ್ಯಾಸಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕೊನೆಗೆ ಹುಮನಾಬಾದ್ ಪ್ರಥಮ ದರ್ಜೆ ಕಾಲೇಜಿಗೆ ಪ್ರಾಂಶುಪಾಲರು ರಜೆ ಘೋಷಣೆ ಮಾಡಿದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group