ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಘಟಿಕೋತ್ಸವ

Must Read

ಮೈಸೂರ -ನಗರದ ಬೋಗಾದಿ ಮುಖ್ಯರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಘಟಿಕೋತ್ಸವ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಶಾಲಾ ಆಡಳಿತಾಧಿಕಾರಿ ಕಾಂತಿ ನಾಯಕ್‍ರವರು ಮಾತನಾಡಿ ಪುಟಾಣಿ ಮಕ್ಕಳ ಭಾಷಾ ಪ್ರೌಢಿಮೆ, ಸಮಯ ಪ್ರಜ್ಞೆ, ವಾಕ್ಚಾತುರ್ಯವನ್ನು ಹೊಗಳುತ್ತಾ ಪ್ರಶಂಸೆ ವ್ಯಕ್ತಪಡಿಸಿದರು. 

ಮುಖ್ಯ ಶಿಕ್ಷಕ ಮಹಮ್ಮದ್ ಫಾರೂಕ್‍ರವರು ಯುಕೆಜಿ ಮಕ್ಕಳಿಗೆ ಪ್ರಮಾಣ ವಚನವನ್ನು ಬೋಧಿಸಿದರು. 

ಈ ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಪೋಷಕರು ಭಾಗವಹಿಸಿ ಮೆರುಗು ತಂದರು. ಪ್ರಿಕೆಜಿ ಮತ್ತು ಎಲ್‍ಕೆಜಿ ಮಕ್ಕಳು ಕಾರ್ಯಕ್ರಮವನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನ ಗೆದ್ದರು. ಯುಕೆಜಿ ಮಕ್ಕಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಂತರ ಎಲ್‍ಕೆಜಿ ಮತ್ತು ಯುಕೆಜಿ ಮಕ್ಕಳ ಪೋಷಕರು ಶಾಲೆಯ ತರಬೇತಿಯ ಹಾಗೂ ಮಕ್ಕಳ ಬೆಳವಣಿಗೆ ನರ್ಸರಿ ಶಿಕ್ಷಕಿಯರ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಪ್ರಿಕೆಜಿ ಹಾಗೂ ಯುಕೆಜಿ ಮಕ್ಕಳು ವಾರ್ಷಿಕ ವರದಿಯನ್ನು ಮಂಡಿಸಿದರು. 

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಉಡುಗೊರೆ ನೀಡಿ, ಸಿಹಿ ಹಂಚುವುದರ ಮೂಲಕ ಅದ್ಧೂರಿಯಾಗಿ ಆಚರಿಸಲಾಯಿತು. ವೇದಿಕೆ ಕಾರ್ಯಕ್ರಮದ ನಂತರ ಪುಟಾಣಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group