ಸಹಕಾರಿ ಸಂಘಗಳು ಬಹು ಸೇವಾ ಕೇಂದ್ರಗಳಾಗಿ ಬೆಳೆಯುವುದು ಅವಶ್ಯಕ- ಸತೀಶ ಕಡಾಡಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಬೆಟಗೇರಿ: ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹಕಾರಿ ಸಂಸ್ಥೆಗಳು ಮತ್ತು ಗ್ರಾಮೀಣ ಭಾಗದ ರೈತರ ಆರ್ಥಿಕ ಪ್ರಗತಿಗಾಗಿ ಸಹಕಾರಿ ಸಂಘಗಳನ್ನು ಬಹು ಸೇವಾ ಕೇಂದ್ರಗಳಾಗಿ ಪರಿವರ್ತಿಸುವ ದೃಷ್ಟಿಯಿಂದ ನಬಾರ್ಡ್ ಬ್ಯಾಂಕ್ ಮತ್ತು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಹಯೋಗದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಬಹು ಸೇವಾ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ ಸಹಕಾರಿ ಸಂಘಗಳ ಆರ್ಥಿಕ ಸ್ವಾವಲಂಬನೆಗಾಗಿ ಮತ್ತು ಅತ್ಯಾಧುನಿಕ ಕೃಷಿ ತಂತ್ರಜ್ಞಾನದ ಸೌಲಭ್ಯಗಳು ಗ್ರಾಮೀಣ ಭಾಗದ ರೈತರಿಗೆ ತಲುಪಿಸುವ ದೃಷ್ಟಿಯಿಂದ ಮಹತ್ವದ ಯೋಜನೆಯನ್ನು ರೂಪಿಸಿದ್ದಾರೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು.

ಮಂಗಳವಾರ ಸೆ. 21 ರಂದು ತಾಲೂಕಿನ ಬೆಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು, ಸಿಬ್ಬಂದಿಗಳು ಹಾಗೂ ರೈತರೊಂದಿಗೆ ಸಮಾಲೋಚನೆ ನಡೆಸಿ ಅಹವಾಲು ಸ್ವೀಕರಿಸಿ ಮಾತನಾಡಿದ ಸತೀಶ ಕಡಾಡಿ ಅವರು, ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳು ತಮ್ಮ ಸಹಕಾರಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿಕೊಳ್ಳುವ ಮೂಲಕ ಸಂಸ್ಥೆಯಲ್ಲಿ ಹಣಕಾಸಿನ ಚಟುವಟಿಕೆ ಹೊರತಾಗಿ ವಿವಿಧ ರೀತಿಯ ಸೇವೆಗಳನ್ನು ರೈತರಿಗೆ ಒದಗಿಸುವ ಮೂಲಕ ಗ್ರಾಮೀಣ ಭಾಗದ ರೈತರ ಸೇವೆ ಸಲ್ಲಿಸಲು ಮುಂದಾಗಬೇಕೆಂದು ಹೇಳಿದರು.

- Advertisement -

ಕೃಷಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಅತ್ಯಾಧುನಿಕ ತಂತ್ರಜ್ಞಾನದ ಅವಶ್ಯಕತೆಯಿದೆ. ಅವುಗಳನ್ನು ರೈತರಿಗೆ ತಲುಪಿಸುವ ಜವಾಬ್ದಾರಿಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ವಹಿಸಿಕೊಂಡರೆ ಸಹಕಾರಿ ಸಂಸ್ಥೆಗಳು ಬೆಳೆಯಲು ರೈತರು ನೀಡಿರುವ ಸಹಕಾರಕ್ಕೆ ಪರ್ಯಾಯವಾಗಿ ರೈತರ ಆರ್ಥಿಕ ಅಭಿವೃದ್ಧಿಗೆ ಕೃಷಿ ಪ್ರಾಥಮಿಕ ಸಹಕಾರ ಸಂಘಗಳು ರೈತರ ಋಣ ತೀರಿಸಿದಂತಾಗುತ್ತದೆ ಎಂದರು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಈ ಯೋಜನೆ ಅನುಷ್ಠಾನಗೊಳಿಸಲು ನನ್ನ ಸಹಕಾರ ನೀಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಗಣ್ಯರು ಬೆಟಗೇರಿ ಗ್ರಾಮಕ್ಕೆ ಇನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ನ ಅವಶ್ಯಕತೆ ಇದ್ದು ಅದನ್ನು ಮಂಜೂರು ಮಾಡಿಸಲು ಮಾನ್ಯ ಸಂಸದರಾದ ಈರಣ್ಣ ಕಡಾಡಿ ಅವರ ಗಮನಕ್ಕೆ ತರುವಂತೆ ವಿನಂತಿಸಿ ಮನವಿ ಸಲ್ಲಿಸಿದರು.

ಮನವಿಯನ್ನು ಸ್ವೀಕರಿಸಿ ಈ ವಿಷಯವನ್ನು ನಮ್ಮ ತಂದೆಯವರ ಗಮನಕ್ಕೆ ತಂದು ರಾಷ್ಟ್ರೀಕೃತ ಬ್ಯಾಂಕನ್ನು ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸತೀಶ ಕಡಾಡಿ ತಿಳಿಸಿದರು.

ಸಂಸ್ಥೆಯ ನಿರ್ದೇಶಕರಾದ ಈರಪ್ಪ ದಯನ್ನವರ, ಈಶ್ವರ ಮುಧೋಳ, ಸುಭಾಸ ಜಂಬಗಿ, ಸುಭಾಸ ಹಾವಾಡಿ, ಪ್ರಮುಖರಾದ ಶ್ರೀಶೈಲ ಗಾಣಿಗೇರ, ಅಜ್ಜಪ್ಪ ಪೆದನ್ನವರ, ಪರಪ್ಪ ಗಿರೆಣ್ಣವರ, ಮುತ್ತೆಪ್ಪ ದಯನ್ನವರ, ಮಹಾದೇವ ಕೋಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!