- Advertisement -
ಬೀದರ – ಬೀದರ್‌ನ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪೇದೆ.ರಾಯಚೂರು ಮೂಲದ ಚಂದ್ರಶೇಖರ್ (28) ಅವರಿಗೆ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತವಾಗಿದ್ದು ಮರಣ ಹೊಂದಿದ್ದಾರೆ.
ಮೂಲತಃ ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಚಂದ್ರಶೇಖರ್.2018ರ ಬ್ಯಾಚ್‌ನಲ್ಲಿ ಪೊಲೀಸ್ ಇಲಾಖೆಗೆ ನೇಮಕವಾಗಿದ್ದರು. ಐದು ವರ್ಷಗಳಿಂದ ನಾಗರಿಕ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಶೇಖರ್.
ಹೃದಯಾಘಾತವಾದ ಬೆನ್ನಲ್ಲೇ ಚಂದ್ರಶೇಖರ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.
- Advertisement -
ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆ ಚಂದ್ರಶೇಖರ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ
ವರದಿ : ನಂದಕುಮಾರ ಕರಂಜೆ, ಬೀದರ