ಚಿಕ್ಕಮಗಳೂರು – ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕು ಬಾಳೆಹೊನ್ನೂರು ಸಮೀಪದ ಸಿಗೋಡು ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ 40 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.
ಈ ಮೊದಲು ಮೂರು ವಿಧ್ಯಾರ್ಥಿಗಳು, ನಾಲ್ಕು ಸಿಬ್ಬಂದಿಗಳಲ್ಲಿ ಕೊರೋನಾ ದೃಢಪಟ್ಟಿತ್ತು.
418 ವಿದ್ಯಾರ್ಥಿಗಳು, ಸಿಬ್ಬಂದಿ ಗಳ ಸ್ವ್ಯಾಬ್ ಪಡೆದಿದ್ದ ಆರೋಗ್ಯ ಇಲಾಖೆಯ ವರದಿಯಿಂದ 40 ಜನರಲ್ಲಿ ಕೊರೋನಾ ದೃಢಪಟ್ಟಿದೆಯೆಂಬುದಾಗಿ ವರದಿಯಾಗಿದೆ.
ಜವಾಹರ್ ನವೋದಯ ವಿದ್ಯಾಲಯವನ್ನು ಜಿಲ್ಲಾಡಳಿತ ಸೀಲ್ ಡೌನ್ ಮಾಡಿದೆ ಆದರೆ ಕೊರೋನಾ ಪತ್ತೆಯಾದವರಲ್ಲಿ ಯಾವುದೇ ಲಕ್ಷಣಗಳಿಲ್ಲ. ವಸತಿ ಶಾಲೆಯಲ್ಲಿಯೇ ಎಲ್ಲರಿಗೂ ಕ್ವಾರಂಟೈನ್ ಮಾಡಲಾಗಿದೆಯೆನ್ನಲಾಗಿದೆ.
ಸ್ಥಳಕ್ಕೆ ಡಿ.ಎಚ್.ಓ, ಸರ್ವೇಕ್ಷಣಾಧಿಕಾರಿ, ಆರೋಗ್ಯ ಸಿಬ್ಬಂದಿ ಭೇಟಿ ನೀಡಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ವರದಿ: ನಂದಕುಮಾರ ಕರಂಜೆ