Belagavi: ಬೆಳಗಾವಿಯಲ್ಲಿ ವಾರದ‌ ನಂತರ ಸಾವಿನ ಪ್ರಮಾಣ ಇಳಿಕೆ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಬೆಳಗಾವಿ: ಜಿಲ್ಲೆಯಲ್ಲಿ ವಾರದ ನಂತರ ಸಾವಿನ ಪ್ರಕರಣಗಳಲ್ಲಿ ಇಳಿಕೆಯಾಗಿದ್ದು, ಇದರಿಂದ ಆತಂಕದಲ್ಲಿದ್ದ ಜನರು ಕೊಂಚ ನಿರಾಳರಾಗಿದ್ದಾರೆ.‌ಜಿಲ್ಲೆಯಲ್ಲಿ ಸತತ ಒಂದು ವಾರದಿಂದ ಪ್ರತಿದಿನ 10 ರಿಂದ 19 ಜನ ಸೋಂಕಿತರು ಮೃತಪಡುತ್ತಿದ್ದರು. ಆದರೆ, ಇಂದು ಅತಿ ಕಡಿಮೆ ಸಾವಿನ ಪ್ರಕರಣಗಳು ವರದಿಯಾಗಿವೆ.

ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಇಂದು (ಮಂಗಳವಾರ) ನಾಲ್ಕು  ಸೋಂಕಿತರು ಮೃತಪಟ್ಟಿದ್ದು, 443 ಜನರಿಗೆ ಹೊಸದಾಗಿ ಸೋಂಕು ತಗುಲಿದೆ.

ಮೃತಪಟ್ಟವರ ಮಾಹಿತಿ:

ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಮೂವರು ಸೋಂಕಿತರು ಹಾಗೂ ನಗರದ ಕೆಎಲ್ಇ ಆಸ್ಪತ್ರೆಯಲ್ಲಿ ಓರ್ವ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ತಾಲೂಕಾವಾರು ಸೋಂಕಿತರ ವಿವರ:

- Advertisement -

ಬೆಳಗಾವಿ 173, ಅಥಣಿ 13, ಬೈಲಹೊಂಗಲ 11, ಚಿಕ್ಕೋಡಿ 93, ಗೋಕಾಕ 32, ಹುಕ್ಕೇರಿ 44, ಖಾನಾಪುರ 34, ರಾಮದುರ್ಗ 3, ರಾಯಬಾಗ 21, ಸವದತ್ತಿ 17 ಹಾಗೂ ಇತರೆ ಇಬ್ಬರಿಗೆ ಇಂದು ಸೋಂಕು ತಗುಲಿದೆ.ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಈವರೆಗಿನ ಸೋಂಕಿತರ ಸಂಖ್ಯೆ 71,476 ಕ್ಕೆ ತಲುಪಿದೆ. 61,957 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. 655 ಸೋಂಕಿತರು ಮೃತಪಟ್ಟಿದ್ದಾರೆ. 8,864 ಸೋಂಕಿತರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!