ಬೀದರ – ರೈತರ ಪಹಣಿ ಬದಲಾವಣೆ ಮಾಡಿಕೊಡಲು ರೈತನಿಂದ ೧೩೦೦ ರೂ. ಲಂಚವನ್ನು ಫೋನ್ ಪೇ ಮೂಲಕ ಭಾಲ್ಕಿ ತಹಶೀಲ್ದಾರ ಕಚೇರಿಯ ಅಧಿಕಾರಿ ಪಡೆದುಕೊಂಡಿದ್ದು ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಸಾರ್ವಜನಿಕರು ಮಾತನಾಡುವಂತಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನಿವಾಸದ ಪಕ್ಕದಲ್ಲಿಯೇ ತಹಶೀಲ್ದಾರ ಕಚೇರಿ ಇದ್ದು ಇಲ್ಲಿ ನಡೆಯುವ ಭ್ರಷ್ಟಾಚಾರದ ಬಗ್ಗೆ ಸಚಿವರಿಗೆ ಅರಿವಿಲ್ಲವೇ ಎಂದು ಕೇಳುತ್ತಿದ್ದಾರೆ.
ಅಧಿಕಾರಿಯು ಫೋನ್ ಪೇ ಮೂಲಕ ಹಣ ಪಡೆದುಕೊಂಡಿದ್ದನ್ನು ರೈತರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ.
ಇದರಿಂದ ನಮ್ಮ ಸರ್ಕಾರ ರೈತರ ಪರವಾಗಿ ಇದೆ ಎಂಬ ಸರ್ಕಾರದ ಮಾತು ಬರೀ ಬೊಗಳೆ ಎಂದಂತಾಗಿದೆ.
ವರದಿ : ನಂದಕುಮಾರ ಕರಂಜೆ, ಬೀದರ