spot_img
spot_img

ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ದೇಶ ಸುಭದ್ರವಾಗಿದೆ: ಈರಣ್ಣ ಕಡಾಡಿ

Must Read

- Advertisement -

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರ ಬಲಿಷ್ಢ ನಾಯಕತ್ವದಲ್ಲಿ ಭಾರತ ದೇಶ ಸಾಕಷ್ಟು ಪ್ರಗತಿಯ ಜೊತೆಗೆ ಅಭಿವೃದ್ಧಿಶೀಲ ರಾಷ್ಟ್ರವಾಗಿ ಸಾಗುತ್ತಿದೆ. ಪ್ರಧಾನಿ ಮೋದಿ ವಿಶ್ವಮಾನ್ಯ ನಾಯಕರಾಗಿದ್ದಾರೆ ಎಂದು ರಾಜ್ಯಸಭಾ ಸದಸ್ಯ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.

ಅರಬಾಂವಿ ಮಂಡಲ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ, ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಗಜಾನನ ಯುವಕ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸ್ಥಳೀಯ ಸದ್ಗುರು ಯಲ್ಲಾಲಿಂಗ ಮಠದ ಆವರಣದಲ್ಲಿ ಸೆ.17ರಂದು ನಡೆದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗಳ ಉದ್ಘಾಟನೆ ಜ್ಯೋತಿ ಬೆಳಗಿಸಿ ಮಾತನಾಡಿದ ಅವರು, ದೇಶಿ ಕ್ರೀಡೆಗಳನ್ನು ಉಳಿಸಿ ಬೆಳೆಸೋಣ, ದೇಶಿ ಕ್ರೀಡೆಗಳನ್ನು ಆಡುವುದರಿಂದ ಶಾರೀರಕ ಸದೃಢತೆ ಹೆಚ್ಚುತ್ತದೆ. ಬಿಜೆಪಿ ಮುಸ್ಲಿಂ ವಿರೋಧಿ ಪಕ್ಷ ಅಲ್ಲ ಎಂದರು.

- Advertisement -

ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ದೇಶ ಸುಭದ್ರವಾಗಿದೆ. ಶ್ರೀರಾಮ ಮಂದಿರ ನಿರ್ಮಾಣ, ಜಮ್ಮು ಕಾಶ್ಮೀರದೊಳಗೆ ಭಯೋತ್ಪಾದನೆ ತಡೆಗಟ್ಟುವುದರ ಜೊತೆಗೆ 370 ವಿಧಿ ರದ್ದು, ಸ್ವಚ್ಛ ಭಾರತ, ಮೇಕ್ ಇನ್ ಇಂಡಿಯಾ ಅಭಿಯಾನ, ಬಡವರಿಗೆ ಉಚಿತ ಗ್ಯಾಸ್, ರೈತರಿಗೆ ಕಿಸಾನ ಸಮ್ಮಾನ ಯೋಜನೆ ಸೇರಿದಂತೆ ಹಲವಾರು ಮಹತ್ವಾಕಾಂಕ್ಷಿ ಯೋಜನೆ ಮತ್ತು ಅಭಿಯಾನಗಳನ್ನು ಜಾರಿಗೆ ತರುವ ಮೂಲಕ ಸಾಕಷ್ಟು ಕೊಡುಗೆಗಳನ್ನು ಮೋದಿಯವರು ದೇಶದ ಜನರಿಗೆ ನೀಡಿದ್ದಾರೆ ಎಂದು ಬಿಜೆಪಿ ಪಕ್ಷದ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಕುರಿತು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ವಿವರಿಸಿ, ಬೆಟಗೇರಿ ಗ್ರಾಮಕ್ಕೆ ಕೆಲವು ಅವಶ್ಯಕ ಸೌಲಭ್ಯಗಳನ್ನು ಕಲ್ಪಿಸಿ ಕೊಡುವುದಾಗಿ ಈ ವೇಳೆ ಭರವಸೆ ನೀಡಿದರು.

ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಬೆಳಗಾವಿ ಗ್ರಾಮೀಣ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಕರ ಕುಲಕರ್ಣಿ ಮುಖ್ಯತಿಥಿಗಳಾಗಿ ಮಾತನಾಡಿದರು. ಗಣ್ಯರು, ಸಾಧಕರನ್ನು ಈ ವೇಳೆ ಸತ್ಕರಿಸಲಾಯಿತು. ರಾಜ್ಯಸಭಾ ಸದಸ್ಯ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಕಬ್ಬಡ್ಡಿ ಆಡುವುದರ ಮೂಲಕ ಪಂದ್ಯಾವಳಿಗಳಿಗೆ ಚಾಲನೆ ನೀಡಿದರು.

ಅರಬಾಂವಿ ಮಂಡಲ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ಶಿವಾನಂದ ಲೋಕಣ್ಣವರ, ಪ್ರದೀಪ ಸಾಣಿಕೊಪ್ಪ ಹನುಮಂತ ಸಂಗಟಿ, ಚಂದ್ರಶೇಖರ ನೀಲಣ್ಣವರ, ಈರಣ್ಣ ದೇಯಣ್ಣವರ, ಈಶ್ವರ ಮುಧೋಳ, ಈರಣ್ಣ ಬಳಿಗಾರ, ಅಶೋಕ ಕೋಣಿ, ಬಸವರಾಜ ದೇಯಣ್ಣವರ, ಬಸವರಾಜ ಪಣದಿ, ರಾಮಣ್ಣ ಮುಧೋಳ, ಕಲ್ಲೋಳಿ ಶ್ರೀ ಮಹಾಲಕ್ಷೀ ಸೌಹಾರ್ದ ಸಹಕಾರಿಯ ಸ್ಥಳೀಯ ಶಾಖೆಯ ಸಲಹಾ ಸಮಿತಿ ಸದಸ್ಯರು, ಸಿಬ್ಬಂದಿ, ಗ್ರಾಮ ಪಂಚಾಯತ ಮಾಜಿ ಮತ್ತು ಹಾಲಿ ಅಧ್ಯಕ್ಷರು, ಸದಸ್ಯರು, ಯಂಗ್ ಸ್ಟಾರ್ ಕಬ್ಬಡ್ಡಿ ತಂಡದ ಸದಸ್ಯರು, ಸ್ಥಳೀಯ ಕಬ್ಬಡ್ಡಿ ಪಂದ್ಯಾವಳಿ ಆಯೋಜಕರು, ಯುವಕರು ಇತರರಿದ್ದರು.

- Advertisement -
- Advertisement -

Latest News

ನಮ್ಮ ಊರ ಜಾತ್ರೆಯೊಂದನ್ನು ನಿಮ್ಮ ಬದುಕಿನ ಯಾತ್ರೆಗೆ ಹೋಲಿಸುತ್ತ….

ಹಾಯ್, ಹಲೋ, ನಮಸ್ಕಾರ...ಸ್ನೇಹಿತರೆ ನೀವೆಲ್ಲ ಹೇಗಿದ್ದೀರಿ? ಬಹಳಷ್ಟು ಜನ ಪರವಾಗಿಲ್ಲ ಚೆನ್ನಾಗಿದ್ದೀವಿ ಅಂತೀರಿ ಇನ್ನು ಕೆಲವಷ್ಟು ಜನ ಅಯ್ಯೋ ಅದ್ ಏನ್ ಕೇಳ್ತೀರಾ ಬಿಡಿ ಅನ್ನುವಂತಹ...
- Advertisement -

More Articles Like This

- Advertisement -
close
error: Content is protected !!
Join WhatsApp Group