ಧೈರ್ಯದಿಂದ ಕೊರೋನಾ ಗೆಲ್ಲಬಹುದು – ಡಾ. ಮಹಾಂತಯ್ಯ ಶ್ರೀಗಳು

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೈಲಹೊಂಗಲ – ಪರಮಾತ್ಮ ರಕ್ತಗತವಾಗಿ ನೀಡಿರುವ ಧೈರ್ಯವೆಂಬ ಶಕ್ತಿಯಿಂದ ಮನುಕುಲವನ್ನು ಕಾಡುತ್ತಿರುವ ಕೊರೋನಾ ಗೆಲ್ಲಬಹುದಾಗಿದೆ ಎಂದು ಧರ್ಮದರ್ಶಿ ಡಾ.ಮಹಾಂತಯ್ಯ ಶಾಸ್ರ್ತಿ ಆರಾದ್ರಿಮಠ ಹೇಳಿದರು.

ಅವರು ಶನಿವಾರ ಪಟ್ಟಣದ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಶ್ರೀಮಾತಾ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ತಾಲೂಕಾ ಆಸ್ಪತ್ರೆಗೆ ಕೋವಿಡ್ ರೋಗಿಗಳಿಗಾಗಿ ಒಂದು ಉಚಿತ ಅಂಬುಲೆನ್ಸ ವಾಹನ ಹಸ್ತಾಂತರಿಸಿ ಮಾತನಾಡಿ, ಕೊರೋನಾ ಕುರಿತು ಜನತೆಯಲ್ಲಿ ಮಾನವೀಯ ಮೌಲ್ಯಗಳ ಕೊರತೆಯಿಂದ ಜಗತ್ತು ವಿನಾಶತ್ತ ಸಾಗುತ್ತಿದೆ. ಸೋಂಕಿತರಿಂದ ದೂರ ಉಳಿಯುವ ಬದಲು ಅವರಿಗೆ ಸಹಾಯ ಮಾಡಿ, ಇಲ್ಲವಾದಲ್ಲಿ ಮಾನಸಿಕ ಧೈರ್ಯ ತುಂಬುವ ಕೆಲಸ ಮಾಡಬೇಕು ಕೋವಿಡ್ ಗೆ ಜನತೆ ಭಯಪಡುವ ಅಗತ್ಯವಿಲ್ಲ ಎಂದರು.

ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹುಕ್ಕೇರಿ ಹಿರೇಮಠ.

- Advertisement -

ಶಾಸಕ ಮಹಾಂತೇಶ ಕೌಜಲಗಿ, ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿ, ಹುಕ್ಕೇರಿ ಹಿರೇಮಠದ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಂದ ಪ್ರೇರಣೆಗೊಂಡು ಮಹಾಂತ ಶಾಸ್ತ್ರೀಗಳು ಧಾರ್ಮಿಕ, ಸಾಮಾಜಿಕ ಸೇವಾ ಮನೋಭಾವನೆಯಿಂದ ಕೊರೋನಾ ಸೇನಾನಿಗಳಿಗೆ ನೆರವಾಗುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಉಪವಿಭಾಗಾಧಿಕಾರಿ ಶಶಿಧರ ಬಗಲಿ, ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಯು.ಎಚ್.ಸಾತೇನಹಳ್ಳಿ, ಪಿಎಸ್‍ಐ ಈರಪ್ಪ ರಿತ್ತಿ, ಜಿಪಂ.ಸದಸ್ಯ ಶಂಕರ ಮಾಡಲಗಿ, ತಾಲೂಕಾ ವೈದ್ಯಾಧಿಕಾರಿ ಸಂಜಯ ಸಿದ್ದನ್ನವರ, ಡಾ.ನಿರ್ಮಲಾ ಮಹಾಂತಶೆಟ್ಟಿ, ಉದ್ಯಮಿ ವಿಜಯ ಮೆಟಗುಡ್ಡ, ಮಹಾಂತೇಶ ತುರಮರಿ, ಸೋಮನಾಥ ಸೊಪ್ಪಿಮಠ, ರಾಜು ಕುಡಸೋಮಣ್ಣವರ, ದೇವಸ್ಥಾನ ಸಮಿತಿಯ ಭಕ್ತರು ಇದ್ದರು.


ಬೈಲಹೊಂಗಲ ಶ್ರೀಮಾತಾ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ.ಮಹಾಂತೇಶ ಶಾಸ್ತ್ರಿ ಆರಾದ್ರಿಮಠ ಅವರು ಜ್ಯೋತಿಷ್ಯ ಜೊತೆಗೆ ಸಮಾಜಮುಖಿ ಕಾರ್ಯವನ್ನು ಮಾಡುತ್ತಾ ಕೊರೋನಾ ರೋಗಿಗಳಿಗೆ ಉಚಿತ ಅಂಬುಲೆನ್ಸ ಸೇವೆಯನ್ನು ಆರಂಭಿಸುತ್ತಿರುವುದು ಶ್ಲಾಘನೀಯವಾಗಿದೆ. ಕೊರೋನಾ ಬೇಗ ವಿಶ್ವದಿಂದ ತೊಲಗಲಿ ಎಲ್ಲರೂ ನೆಮ್ಮದಿಯಿಂದ ಇರಲಿ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ ಮಾಸ್ಕನ್ನು ಧರಿಸೋಣ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳೋಣ ಎಲ್ಲರ ಆರೋಗ್ಯ ಚೆನ್ನಾಗಿರಲಿ ಎನ್ನುವುದು ಇವರ ಇಚ್ಛೆ ಶ್ರೀ ಗುರುಶಾಂತೇಶ್ವರ ದುರ್ಗಾಪರಮೇಶ್ವರಿ ಎಲ್ಲರಿಗೂ ಕೂಡ ಒಳಿತನ್ನು ಮಾಡಲಿ.

-ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹುಕ್ಕೇರಿ ಹಿರೇಮಠ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!