ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಅವರ ಪತ್ನಿ ಚನ್ನಮ್ಮ ಅವರಿಗೆ ಕೊರೋನಾ ಇರುವುದು ದೃಢಪಟ್ಟಿದೆ.
ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ದೇವೇಗೌಡರಿಗೆ ಶೀಘ್ರವಾಗಿ ಚೇತರಿಸಿಕೊಳ್ಳುವ ಹಾರೈಕೆ ವ್ಯಕ್ತಪಡಿಸಿದ್ದಾರೆ.
ದೇವೇಗೌಡರೂ ಮೋದಿಯವರಿಗೆ ಪ್ರತಿಕ್ರಿಯೆ ಸಲ್ಲಿಸಿದ್ದು ಧನ್ಯವಾದಗಳನ್ನು ತಿಳಿಸಿ, ಬೆಂಗಳೂರಿನಲ್ಲಿಯೇ ತಾವು ಚಿಕಿತ್ಸೆ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ.
ದೇವೇಗೌಡಾ ದಂಪತಿಗಳಿಗೆ ಕೊರೋನಾ ಇರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅಲ್ಲದೆ ಅನೇಕ ರಾಜಕೀಯ ನಾಯಕರು ಬೇಗ ಚೇತರಿಕೆಗೊಳ್ಳಲು ಹಾರೈಸಿದ್ದಾರೆ.