- Advertisement -
ಕೋಲಾರ – ನಿಗೂಢ ಕಾಯಿಲೆಯೊಂದು ಕಾಣಿಸಿಕೊಂಡ ಪರಿಣಾಮ ಒಂದೇ ವಾರದಲ್ಲಿ ೧೦ ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೊಳತೂರು ಗ್ರಾಮದಲ್ಲಿ ನಡೆದಿದೆ.
ವೈರಸ್ ಸೋಂಕಿತ ಬಸವನ ಹುಳುಗಳು ಕಾರಣ ಎನ್ನಲಾಗುತ್ತಿದ್ದು ಪಶು ಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ.ಜಗದೀಶ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸೋಂಕು ಕಾಣಿಸಿಕೊಂಡ ಎರಡೇ ದಿನಕ್ಕೆ ಹಸುಗಳು ಸಾವನ್ನಪ್ಪುತ್ತಿದ್ದು ರೈತರಲ್ಲಿ ಆತಂಕ ಮೂಡಿಸಿದೆ.
ಇತ್ತ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರು ಬೀದರ ಜಿಲ್ಲೆಗೆ ಮಾತ್ರ ಸೀಮಿತರಾಗಿದ್ದಾರೆ ಎಂದು ಆರೋಪಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದು ಮೃತಪಟ್ಟ ಹಸುಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
- Advertisement -
ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ