spot_img
spot_img

ಕ್ರೂಸರ್ ಅಪಘಾತ: ಕಡಾಡಿ ಸಂತಾಪ

Must Read

spot_img

ಮೂಡಲಗಿ: ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ಕೆಲಸಕ್ಕೆ ತೆರಳುತ್ತಿದ್ದ ಜನರ ಕ್ರೂಸರ್ ವಾಹನ ಬಳ್ಳಾರಿ ನಾಲೆಗೆ ಉರುಳಿ ನಡೆದ ಅಪಘಾತದಲ್ಲಿ ಅಕ್ಕತಂಗೇರಹಾಳ ಗ್ರಾಮದ 7 ಮಂದಿ ಸ್ಥಳದಲ್ಲೇ ಮೃತಪಟ್ಟ ವಿಷಯ ತಿಳಿದು ಅತೀವ ದುಃಖವಾಯಿತು. ಅವರ ಕುಟುಂಬಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು.

ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ ಹಾಗೂ ಜಿಲ್ಲಾಡಳಿತದಿಂದ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದು ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಇನ್ನೊಮ್ಮೆ ಇಂತಹ ಘಟನೆ ಮರುಕಳಿಸದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದರು.

- Advertisement -
- Advertisement -

Latest News

ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!

ಬೇರೆಯವರ ಮೇಲೆ ಅವಲಂಬಿತವಾದ ಬದುಕು, ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್ (ವಿ.ಕೃ.ಗೋಕಾಕ್). ಕನ್ನಡಕ್ಕೆ...
- Advertisement -

More Articles Like This

- Advertisement -
close
error: Content is protected !!