ಯಾದವಾಡದಲ್ಲಿ ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ

Must Read

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ  ಘಟಕ ಮತ್ತು ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸವ ಸಮಿತಿ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನ.2 ರಂದು ಸಂಜೆ 5 ಗಂಟೆಗೆ ಯಾದವಾಡ ಗ್ರಾಮದ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಜರುಗಲಿದೆ ಎಂದು ಯಾದವಾಡ ಗ್ರಾ.ಪಂ ಸದಸ್ಯ ಹಾಗೂ ವೇದಿಕೆ ಜಿಲ್ಲಾ ಸಂಚಾಲಕ ಕಲ್ಮೇಶ ಗಾಣಿಗೇರ ತಿಳಿಸಿದ್ದಾರೆ.

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಯಾದವಾಡ ಚೌಕಿಮಠದ ಶ್ರೀ ಶಿವಯೋಗಿ ದೇವರು, ಸಾನ್ನಿಧ್ಯವನ್ನು ಕೋಲಾರದ ಶ್ರೀ ಕಲ್ಲಿನಾಥ ದೇವರು, ಹುಲಜಂತಿ ಪೀಠದ ಶ್ರೀ ಮಾಳಿಂಗರಾಯ ಮಹಾರಾಜರು, ಯಾದವಾಡ ಪತ್ರಿಮಠದ ಶ್ರೀ ಶಿವಾನಂದ ಮಹಾರಾಜರು ವಹಿಸುವರು.

ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸುವರು. ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಶಿವಪ್ಪಗೌಡ ನ್ಯಾಮಗೌಡ ಅಧ್ಯಕ್ಷತೆ ವಹಿಸುವರು.

ಸಂಸದ ಈರಣ್ಣಾ ಕಡಾಡಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ, ಜೆಡಿಎಸ್ ಮುಖಂಡ ಭೀಮಪ್ಪ ಗಡಾದ ಜ್ಯೋತಿ ಬೆಳಗಿಸುವರು, ರಾಜಕುಮಾರ ಟೋಪನ್ನವರ, ಅನಂತರಾವ ಘೋರ್ಪಡೆ, ಶ್ರೀಶೈಲ್ ಭಜಂತ್ರಿ, ಡಾ.ಶಿವನಗೌಡ ಪಾಟೀಲ, ಬಸವರಾಜ ಭೂತಾಳಿ ಧ್ವಜಾರೋಹಣ ನೆರವೇರಿಸುವರು ಮತ್ತು ಮುಖ್ಯ ಅತಿಥಿಗಳಾಗಿ ವಿವಿಧ ಮುಖಂಡರ, ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತಿತರರು ಭಾಗವಹಿಸುವರು ಎಂದು ಸಂಘಟಕರು ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group