ಕಾಡುಗೋಡಿಯ ಜನನಿ ಪಬ್ಲಿಕ್ ಶಾಲೆ ಮತ್ತು ಪಿಯು ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ‘ಜನನಿ ಜಾಯ್ ಫೆಸ್ಟಿವಲ್–2026’ ಕಾರ್ಯಕ್ರಮವು ಶಾಲಾ ಆವರಣದಲ್ಲಿ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಬರಿ ಆಶ್ರಯ ಧಾಮದ ಸ್ಥಾಪಕ ಹಾಗೂ ಶಿಕ್ಷಣ–ಸಮಾಜ ಸೇವಾ ಕ್ಷೇತ್ರದ ಹಿರಿಯರಾದ ಕನ್ನಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿರುವ ಬೆಳತೂರ್ ಎನ್. ಯಲ್ಲಪ್ಪ ಅವರು ಭಾಗವಹಿಸಿ ಮಾತನಾಡುತ್ತ ಶಾಲೆಯ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವ ಈ ಕಾರ್ಯಕ್ರಮ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಮೂಲಕ ಕಳೆದ ಹಲವು ವರ್ಷಗಳಿಂದ ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಈ ವಾರ್ಷಿಕೋತ್ಸವವು ವಿದ್ಯಾರ್ಥಿಗಳ ಆತ್ಮವಿಶ್ವಾಸ, ಸೃಜನಶೀಲತೆ ಮತ್ತು ನಾಯಕತ್ವ ಗುಣಗಳನ್ನು ವೃದ್ಧಿಸುವ ಮಹತ್ವದ ವೇದಿಕೆಯಾಗಿದೆ ಎಂದು ಅಭಿಪ್ರಾಯ ಪಟ್ಟರು
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ, ನೃತ್ಯ, ಸಂಗೀತ ಹಾಗೂ ದೇಶಭಕ್ತಿ ಕಾರ್ಯಕ್ರಮಗಳು ನಡೆಯಿತು. ಶಾಲಾ ಕಾರ್ಯದರ್ಶಿ ಕೆ.ಎಸ್. ಚಂದ್ರಶೇಖರ್ , ಶೈಕ್ಷಣಿಕ ಆಡಳಿತಾಧಿಕಾರಿ ಪದ್ಮಾವತಿ ಕೆ.ವಿ, ಪ್ರಾಂಶುಪಾಲರು ರೇಖ ಎಸ್ , ಉಪ ಪ್ರಾಂಶುಪಾಲರು ಸುಧಾರಾಣಿ ಜಿ ಹಾಗು ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

