ಸಿಂದಗಿ-ಸಂಸ್ಕೃತಿ ಇರುವುದು ವ್ಯಕ್ತಿತ್ವದ ಬೆಳವಣಿಗೆಗೆ ಹೊರತು ಸಂಘರ್ಷಕ್ಕೆ ಅಲ್ಲ ಎಂದು ಸ್ಥಳೀಯ ಸಿ.ಎಂ.ಮನಗೂಳಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.
ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪಪೂ ಕಾಲೇಜಿನ ಸಭಾಭವನದಲ್ಲಿ ಜರುಗಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಮತ್ತು ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು ಸಿಂದಗಿ ಇವುಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಇಂದು ಸಂಸ್ಕೃತಿಯ ಬಗ್ಗೆ ನಂಬಿಕೆ ಕಡಿಮೆಯಾಗುತ್ತಿದೆ. ಮತ್ತು ಅದು ಭಾರತದಲ್ಲಿ ಆಡಂಬರವಾಗುತ್ತಿದೆ ಇದು ಮಾರಕವಾಗಿದೆ. ಶಿಕ್ಷಣ ಇಲಾಖೆಗಳು ನಡೆಸುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಾಯಕ ಸಂಸ್ಕೃತಿಯನ್ನು ಆರ್ಥೈಸಬೇಕು. ನಾವು ದುಡಿಮೆಗೆ ಹೆಚ್ಚು ಮಹತ್ವ ನೀಡಿದ್ದಲ್ಲಿ ಮಕ್ಕಳಲ್ಲಿ ಸ್ವಾವಲಂಬನೆಯ ಗುಣ ಮುಡುತ್ತದೆ ಎಂದರು.
ಕನ್ನೂರ ಸರಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಎಲ್.ಆರ್.ಹಳ್ಳದಮನಿ ಮಾತನಾಡಿ, ಮಕ್ಕಳಿಗೆ ಕೇವಲ ಶಿಕ್ಷಣ ನೀಡಿದರೆ ಸಾಲದು ಅದರ ಜೊತೆಗೆ ಸಂಸ್ಕಾರ, ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಹೆಚ್ಚು ಪರಿಕಲ್ಪನೆಯನ್ನು ಶಿಕ್ಷಕರಾದವರು ನೀಡಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳ ಮಾನಸಿಕ ಶಕ್ತಿಯನ್ನು ವೃದ್ದಿಗೊಳಿಸುತ್ತವೆ ಎಂದರು.
ಪುರಸಭೆಯ ಅಧ್ಯಕ್ಷ ಶಾಂತವೀರ ಬಿರಾದಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ವೇಳೆ ಜಿಲ್ಲಾ ನೌಕರ ಸಂಘದ ಕಾರ್ಯಕಾರಣಿ ನಿರ್ದೇಶಕರಾಗಿ ಆಯ್ಕೆಯಾದ ಪಪೂ ಇಲಾಖೆ ವಿಜಯಪುರದ ಶಾಖಾಧಿಕಾರಿ ಪ್ರಕಾಶ ಗೊಂಗಡಿ, ಪುರಸಭೆಯ ಅಧ್ಯಕ್ಷ ಶಾಂತವೀರ ಬಿರಾದಾರ, ಎಲ್.ಆರ್.ಹಳ್ಳದಮನಿ, ರಾಜಶೇಖರ ಕೂಚಬಾಳ ಅವರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಸಂಸ್ಥೆಯ ನಿರ್ದೇಶಕ ಶಂಕರಗೌಡ ಪಾಟೀಲ ಯಂಕಂಚಿ, ಕರ್ನಾಟಕ ರಾಜ್ಯ ಪದವಿ ಪೂರ್ವ ಉಪನ್ಯಾಸಕರ ಸಂಘ ವಿಜಯಪುರದ ಅಧ್ಯಕ್ಷ ಎಮ್.ಡಿ.ಹೆಬ್ಬಿ, ವಿಜಯಪುರದ ಪ್ರಾಚಾರ್ಯ ಮಹಾಮಂಡಳಿ ಕಾರ್ಯದರ್ಶಿ ಕೆ.ಎ.ಉಪ್ಪಾರ, ಕೂಡಗಿ ಸರಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಕೆ.ಜಿ.ಲಮಾಣಿ, ಸಿಂದಗಿ ಸರಕಾರಿ ಕಾಲೇಜಿನ ಪ್ರಾಚಾರ್ಯ ಎನ್.ಆರ್.ಗಂಗನಳ್ಳಿ, ಶ್ರೀ ಪದ್ಮರಾಜ ಮಹಿಳಾ ಪಪೂ ಕಾಲೇಜಿನ ಪ್ರಾಚಾರ್ಯ ಎಮ್.ಎಸ್.ಹಯ್ಯಾಳಕರ, ಅಂಜುಮನ ಪಪೂ ಕಾಲೇಜಿನ ಪ್ರಾಚಾರ್ಯ ಎ.ಬಿ.ಕುಚೇಲ. ಆರ್.ಡಿ.ಪಾಟೀಲ ಕಾಲೇಜಿನ ಪ್ರಾಚಾರ್ಯ ಬಿ.ಎಮ್.ಸಿಂಗನಳ್ಳಿ ವೇದಿಕೆ ಮೇಲಿದ್ದರು.
ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ವಿವಿಧ ಪಪೂ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿನಿ ಕಾಶಿಬಾಯಿ ಮಾಶ್ಯಾಳ ಪ್ರಾರ್ಥಿಸಿದರು, ಉಪನ್ಯಾಸಕ ಸಿದ್ದಲಿಂಗ ಕಿಣಗಿ ನಿರೂಪಿಸಿದರು, ಉಪನ್ಯಾಸಕಿ ಮುಕ್ತಾಯಕ್ಕ ಕತ್ತಿ ವಂದಿಸಿದರು.