spot_img
spot_img

ವಿಜ್ಞಾನ ಕ್ಷೇತ್ರಕ್ಕೆ ಸಿ.ವಿ.ರಾಮನ್ ಕೊಡುಗೆ ಅಪಾರ- ಶಿಕ್ಷಕ ಕಬ್ಬೂರ ಅಭಿಮತ

Must Read

spot_img
- Advertisement -

ಸವದತ್ತಿ: ಭೌತಶಾಸ್ತ್ರದಲ್ಲಿ ಬೆಳಕಿನ ವಿಷಯದ ಮೇಲೆ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಸಿ.ವಿ.ರಾಮನ್ ರವರದ್ದಾಗಿದ್ದು, ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ವಿಜ್ಞಾನಿಯಾಗಿದ್ದಾರೆ. ಅವರು ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದು ಶಿಕ್ಷಕ ಎನ್.ಎನ್.ಕಬ್ಬೂರ ಅಭಿಪ್ರಾಯ ಹಂಚಿಕೊಂಡರು.

ಭಾರತದ ಹೆಮ್ಮೆಯ ವಿಜ್ಞಾನಿಯಾದ ಸಿ.ವಿ.ರಾಮನ್ ರು ಅವರ “ರಾಮನ್ ಎಫೆಕ್ಟ್” ಎಂಬ ಅಧ್ಯಯನದ ವಿವರಗಳನ್ನು 1928 ಫೆಬ್ರವರಿ 28 ರಂದು ಜಗತ್ತಿಗೆ ತಿಳಿಸಿದರು. ಅದರ ಸವಿನೆನಪಿಗಾಗಿ “ರಾಷ್ಟ್ರೀಯ ವಿಜ್ಞಾನ ದಿನ” ಪ್ರತಿ ವರ್ಷ ಆಚರಿಸಲಾಗುತ್ತದೆ ಎಂದು ಪಟ್ಟಣದ ಸರಕಾರಿ ಪ್ರಾಥಮಿಕ ಶಾಲೆ ನಂ-6 ರಲ್ಲಿ ಹಮ್ಮಿಕೊಂಡಿದ್ದ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಸಂದರ್ಭದಲ್ಲಿ ಅವರು ಮಾತನಾಡಿದರು.

ನಂತರ ಮಕ್ಕಳಿಗೆ ಸರಳ ಪ್ರಯೋಗಗಳನ್ನು ಮಾಡಿ ತೋರಿಸಲಾಯಿತು. ಮಕ್ಕಳಿಗಾಗಿ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಎಮ್.ಆರ್.ಫಂಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪಾಲಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ರಾಜ್ಯದ ರಸ್ತೆ ಕಾಮಗಾರಿಗಳು ಸೆ.2024 ರೊಳಗೆ ಪೂರ್ಣ ; ಮೇಲ್ಮನೆಗೆ ಗಡಕರಿ ಉತ್ತರ

ಮೂಡಲಗಿ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 663 ಕೋಟಿ ರೂ.ಗಳ ವೆಚ್ಚದಲ್ಲಿ ಸುಮಾರು 241 ಕಿ.ಮೀ ಉದ್ದದ 36 ರಾಜ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group