ಬೀದರ – 5 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ದಾಳಿ ನಡೆದು ಬೀದರ್ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಆರೋಗ್ಯ ಇಲಾಖೆಯ ಜ್ಯೂನಿಯರ್ ಹೆಲ್ತ್ ಇನ್ಸ್‌ಪೆಕ್ಟಿಂಗ್ ಆಫೀಸರ್ ಕ್ರಿಸ್ತ್‌ದಾಸ ಲೋಕಾ ಬಲೆಗೆ ಬಿದ್ದ ಅಧಿಕಾರಿ
ಬೀದರ್‌ನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಹೆಚ್‌ಐಒ ಆಗಿರುವ ಕ್ರಿಸ್ತ್‌ದಾಸ ಪೆಟ್ರೋಲ್ ಬಂಕ್‌ಗೆ NOC ಕೊಡಲು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಇವತ್ತು ಹಣ ಕೊಡುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದಲ್ಲಿ ದಾಳಿ ನಡೆದಿತ್ತು.
ವರದಿ: ನಂದಕುಮಾರ ಕರಂಜೆ, ಬೀದರ

