ಕಲಬುರ್ಗಿ – ಜಾರಕಿಹೊಳಿ ಸಿಡಿ ಪ್ರಕರಣ ಕುರಿತಂತೆ ಮುಖ್ಯ ನ್ಯಾಯಾಧೀಶರಿಂದ ತನಿಖೆಗೆ ಆಗ್ರಹಿಸಲಾಗಿತ್ತು. ಇದೀಗ ಲೇಡಿಯೇ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾಳೆ ನೋಡೋಣ ಏನಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಅವರು ನಗರದಲ್ಲಿ ಪತ್ರಕರ್ತರೊಡನೆ ಮಾತನಾಡುತ್ತಿದ್ದರು. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಕಾರಿನ ಮೇಲೆ ಹಲ್ಲೆ ನಡೆಸಿದ್ದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದ ಅವರು ಸಿಡಿ ಪ್ರಕರಣದಲ್ಲಿ ಡಿಕೆಶಿ ಹೆಸರು ಕೇಳಿ ಬಂದ ಬಗ್ಗೆ ಪ್ರಶ್ನಿಸಿದಾಗ, ಆ ಬಗ್ಗೆ ಅವರನ್ನೇ ಕೇಳಿ ಎಂದು ಜಾರಿಕೊಂಡರು.
ಬಸವಕಲ್ಯಾಣ ದಲ್ಲಿ ಜೆಡಿಎಸ್ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಸಿದ್ಧರಾಮಯ್ಯ ಹೇಳಿದರು.
ಕಠಿಣ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಲ್ಲಿ ಇನ್ನೂ ಕೊರೋನಾ ಪ್ರಕರಣಗಳು ಹೆಚ್ಚಾಗುವ ಸಂಭವವಿದೆ ಎಂದರು.