Homeಸುದ್ದಿಗಳುಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವಿರುದ್ಧ ದಲಿತ ಸಂಘಟನೆ ಆಕ್ರೋಶ

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವಿರುದ್ಧ ದಲಿತ ಸಂಘಟನೆ ಆಕ್ರೋಶ

ಬೀದರ – ಗಡಿ ಜಿಲ್ಲೆ ಬೀದರ್ ನಲ್ಲಿ ದಲಿತ ಅಧಿಕಾರಿ ವರ್ಗಾವಣೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಉಸ್ತುವಾರಿ ಸಚಿವರಿಗೆ ಆದಿ ಜಾಂಬವ ಸಮಿತಿ ಜಿಲ್ಲಾಧ್ಯಕ್ಷ ರಾಜು ಕಡ್ಯಾಳ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ವಿಜಯಲಕ್ಷ್ಮಿ ಕೋಬಾಳ್ಕರ್ ಅವರ ವರ್ಗಾವಣೆ ಆದೇಶ ತಕ್ಷಣವೇ ಹಿಂಪಡೆಯಬೇಕು, ಹಿಂಪಡೆಯದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಆದಿ ಜಾಂಬವ ಸಮಿತಿ ಜಿಲ್ಲಾ ಘಟಕ ಅಧ್ಯಕ್ಷ ರಾಜು ಕಡ್ಯಾಳ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರಿಗೆ ಎಚ್ಚರಿಕೆ ನೀಡಿದರು.

ಈಚೆಗೆ ನಡೆದ ಜಿಲ್ಲಾ ಕೆಡಿಪಿ ಸಭೆಯಲ್ಲಿ ವಿಜಯಲಕ್ಷ್ಮಿ ಅವರಿಗೆ ಮನ ನೋಯುವಂತೆ ಮಾತಾಡಿದ್ದಲ್ಲದೇ ವರ್ಗಾವಣೆ ಆದೇಶ ಹೊರಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವರ ಧೋರಣೆಯನ್ನು ಖಂಡಿಸಿ, ಜಿಲ್ಲಾ ಕೇಂದ್ರ ಬೀದರದಲ್ಲಿ ನಡೆಸಲಾದ ಸರಳ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಅವರಿಗೆ ಮನವಿಪತ್ರ ಸಲ್ಲಿಸುವುದಕ್ಕೂ ಮುನ್ನ ಮಾತನಾಡಿದರು.

ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂಜೀವಕುಮಾರ ಬೇಂದ್ರೆ ಇನ್ನೂ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

RELATED ARTICLES

Most Popular

error: Content is protected !!
Join WhatsApp Group