ಬೀದರ – ರಾಜ್ಯದ ಮುಖ್ಯ ಮಂತ್ರಿ ಅಂಬೇಡ್ಕರ್ ಪ್ರತಿಮೆ ಅವಮಾನ ಮಾಡಿದ್ದಾರೆ ಎಂದು ಬೀದರನಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ಮಾಡಿದ ಘಟನೆ ನಡೆಯಿತು.
ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಮಾಲಾರ್ಪಣೆ ಮಾಡದ ಹಿನ್ನೆಲೆಯಲ್ಲಿ ದಲಿತ ಸಂಘಟನೆ ಸಿಎಂ ವಿರುದ್ಧ ಪ್ರತಿಭಟನೆ ಮಾಡಿದರು.
ಗಡಿ ಜಿಲ್ಲೆ ಬೀದರ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 18ರಂದು ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಹುಮನಾಬಾದ್‌ನ ಮಾಣಿಕ ಪ್ರಭು ಶಾಲಾ ಮೈದಾನಕ್ಕೆ ಬಂದು ಇಳಿದು ಅಲ್ಲಿಂದ ಹುಮನಾಬಾದ್ ತೇರು ಮೈದಾನದಲ್ಲಿ ಆಯೋಜಿಸಿರುವ ಜನ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು ಇದೇ ಸಮಯದಲ್ಲಿ ಮುಖ್ಯಮಂತ್ರಿ ಅಂಬೇಡಕರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿಲ್ಲ ಎಂದು ದಲಿತ ಸಂಘಟನೆ ಸಿಎಂ ವಿರುದ್ಧ ಪ್ರತಿಭಟನೆಗೆ ಇಳಿಯಿತು.
ವರದಿ: ನಂದಕುಮಾರ ಕರಂಜೆ, ಬೀದರ