ಬೆಳಗಾವಿ: ಬೆಳಗಾವಿಯ ಬಸವರಾಜ ಕಟ್ಟಿಮನಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶುಕ್ರವಾರ (ಜ.21) “ದಾಸೋಹ ದಿನ” ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಿಸಲಾಯಿತು.
ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಡಾ. ಶಿವಕುಮಾರ ಸ್ವಾಮಿಗಳ ಪುಣ್ಯತಿಥಿಯನ್ನು “ದಾಸೋಹ ದಿನ” ವನ್ನಾಗಿ ಸರ್ಕಾರ ಘೋಷಿಸಿದೆ.
ಈ ಹಿನ್ನೆಲೆಯಲ್ಲಿ ಶ್ರೀ ಡಾ.ಶಿವಕುಮಾರ ಸ್ವಾಮಿಗಳ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಪೂಜೆ ನೆರವೇರಿಸಿ, ಪುಷ್ಪಾರ್ಚನೆ ಮಾಡಿದರು.
ಇದೇ ಸಂದರ್ಭದಲ್ಲಿ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೂ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.
ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿ ಪ್ರಕಾರ ಎರಡೂ ಕಾರ್ಯಕ್ರಮ ಗಳನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು.
ಸಮಾಜದ ಮುಖಂಡರಾದ ಜಿ.ಜಿ.ತಳವಾರ, ಬಸವರಾಜ ಸುಣಗಾರ, ರವಿಶಂಕರ ಚನಾಳ, ರಮೇಶ್ ಘಸ್ತಿ, ವಿಠ್ಠಲ ಸುಣಗಾರ, ಮಹಾಬಲೇಶ್ವರ ಸಾಬಣ್ಣವರ, ಎಚ್.ಟಿ.ವಾಲೀಕಾರ, ಬಿ.ಸುರೇಖಾ, ವಿಜಯ ಹೊಂಗಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.