spot_img
spot_img

ಡೇ ಸ್ಪೆಷಲ್‌: ವಿಶ್ವ ಜಲ ದಿನ ಮಾರ್ಚ್ 22

Must Read

- Advertisement -

ನೀರಿನ ಬಳಕೆ, ಉಳಿಕೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮಾರ್ಚ್‌ 22 ರಂದು ವಿಶ್ವ ಜಲ ದಿನವನ್ನು ಭಾರತ ಸೇರಿದಂತೆ ವಿಶ್ವದಾದ್ಯಂತ ಆಚರಿಸಲಾಗುತ್ತದೆ.

1993 ರಲ್ಲಿ ಬ್ರೆಜಿಲ್‌ನ ರಿಯೋದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮಾವೇಶದಲ್ಲಿ ಜಲ ಸಂರಕ್ಷಣೆಯ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಯಿತು ಹಾಗೂ ಪ್ರತಿ ವರ್ಷ ಮಾರ್ಚ್‌ 22 ರಂದು ವಿಶ್ವ ಜಲ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು.

ಪ್ರತಿವರ್ಷ ಒಂದು ಧ್ಯೇಯವಾಕ್ಯದೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷದ ಧ್ಯೇಯವಾಕ್ಯ ‘ನೇಚರ್‌ ಫಾರ್‌ ವಾಟರ್‌’. 21 ನೇ ಶತಮಾನದಲ್ಲಿ ನಾವು ಎದುರಿಸುತ್ತಿರುವ ನೀರಿನ ಸವಾಲುಗಳಿಗೆ ಪ್ರಕೃತಿ ಆಧಾರಿತ ಪರಿಹಾರಗಳನ್ನು ಅನ್ವೇಷಿಸುವುದಾಗಿದೆ. ಹಾನಿಗೊಳಗಾದ ಪರಿಸರ ವ್ಯವಸ್ಥೆಯು ಮಾನವ ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ ಮತ್ತು ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಪ್ರಕೃತಿಯನ್ನು ಉಳಿಸಿ ನೀರನ್ನು ಸಂರಕ್ಷಿಸಬೇಕಾಗಿದೆ.

- Advertisement -

ಏಕೆಂದರೆ ವಿಶ್ವದ ಸಕಲ ಜೀವರಾಶಿಗಳಿಗೆ ನೀರು ಜೀವನಾಧಾರ. ಜಲವೇ ಸಂಜೀವಿನಿ. ನಮ್ಮ ಭಾರತದಲ್ಲಿ ನೀರಿಗೆ ದೈವೀ ಸ್ಥಾನವನ್ನು ನೀಡಲಾಗಿದೆ. ಸಂಶೋಧನೆ ಪ್ರಕಾರ ಭೂಮಿ ಮಾತ್ರ ಮಾನವ ಯೋಗ್ಯ ತಾಣ ಮತ್ತು ಶುದ್ಧ ಸಿಹಿ ನೀರು ಸಿಗುವ ಏಕೈಕ ಗ್ರಹ. ಭೂಮಿಯಲ್ಲಿ ಉಪಯೋಗಿಸಬಹುದಾದ ಸಿಹಿ ನೀರಿನ ಅಂಶ ಬಹಳ ಕಡಿಮೆ ಇದೆ. ಇಂದು, 2.1 ಶತಕೋಟಿ ಜನರ ಮನೆಯಲ್ಲಿ ಕುಡಿಯುವ ನೀರು ಇಲ್ಲದೆ ಬದುಕುತ್ತಿದ್ದಾರೆ.

ಇದು ಅವರ ಆರೋಗ್ಯ, ಶಿಕ್ಷಣ ಮತ್ತು ಜೀವನೋಪಾಯದ ಮೇಲೆ ತೀವ್ರವಾಗಿ ಪರಿಣಾಮ ಬೀರುತ್ತದೆ. ಬೆಳೆಯುತ್ತಿರುವ ಜನಸಂಖ್ಯೆ, ಜಾಗತಿಕ ತಾಪಮಾನ, ಪರಿಸರ ಮಾಲಿನ್ಯ, ಕೈಗಾರಿಕರಣ, ಅರಣ್ಯನಾಶ ಇನ್ನಿತರ ಕಾರಣಗಳಿಂದ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿದೆ.

ಬೇಸಿಗೆ ಶುರುವಾಗುವ ಮುಂಚೆಯೇ ನೀರಿನ ಕೊರತೆ ಕಂಡುಬರುತ್ತಿದೆ. ನಮ್ಮ ಭಾರತದಲ್ಲಿ ಎಷ್ಟೋ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಇಂದಿಗೂ ನೀರಿನ ಕೊರತೆಯ ತೀವ್ರ ಸಮಸ್ಯೆ ಇದೆ. ನೀರನ್ನು ಅನವಶ್ಯಕವಾಗಿ ಪೋಲುಮಾಡದೆ ಹನಿ ಹನಿ ನೀರನ್ನು ಸಂರಕ್ಷಿಸುವುದು, ಮುಂದಿನ ಪೀಳಿಗೆಗೆ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ.

- Advertisement -

ನೀರನ್ನು ಉಳಿಸೋಣ, ಜೀವಸಂಕುಲವನ್ನು ರಕ್ಷಿಸೋಣ


ಹೇಮಂತ ಚಿನ್ನು

ಕರ್ನಾಟಕ ಶಿಕ್ಷಕರ ಬಳಗ

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group