ಸಿಂದಗಿ: ಸೋಲು ಗೆಲುವುಗಳನ್ನು ಸಮನಾಗಿ ಕಂಡು,ನಿರಂತರ ಪರಿಶ್ರಮದಿಂದ ಮುಂದೆ ಸಾಗಿದಾಗ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಜಿಲ್ಲಾ ಪಂಚಾಯತ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಸಿಂದಗಿ ಇವರ ವತಿಯಿಂದ ಅಬು ಶಿಕ್ಷಣ ಸಂಸ್ಥೆ ಸಿಂದಗಿ ಇವರ ಸಹಯೋಗದಲ್ಲಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಸಿಂದಗಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ,ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಗುವಿನ ಸರ್ವಾಂಗೀಣ ಅಭಿವೃದ್ದಿಯೇ ಶಿಕ್ಷಣವಾಗಿದ್ದು,ಮಗುವಿನ ಪ್ರತಿಭೆಗೆ ನೀರೆರೆದು ಪೋಷಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು.
ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಮ್ ಬಿ ಯಡ್ರಾಮಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಪುರಸಭೆಯ ಅಧ್ಯಕ್ಷ ಶಾಂತವೀರ ಬಿರಾದಾರ,ತಾಲ್ಲೂಕಿನ ದೈಹಿಕ ಶಿಕ್ಷಣ ಪರೀವೀಕ್ಷಣಾಧಿಕಾರಿ ನಾಮದೇವ ಚವ್ಹಾಣ,ಅಬು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ ಎ ಖತೀಬ,ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಎಚ್ ಬಿರಾದಾರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು ಅರವಿಂದ ಡೋನೂರ, ತಾಲೂಕ್ ಪಂಚಾಯತ್ ಸಹಾಯಕ ನಿರ್ದೇಶಕರು ನಿತ್ಯಾನಂದ ಯಲಗೋಡ, ಪ್ರಧಾನ ಕಾರ್ಯದರ್ಶಿ ಬಸವರಾಜ್ ಸೋಂಪುರ್, ಅಕ್ಬರ ಖತಿಬ ಸೇರಿದಂತೆ ಅನೇಕರು ಇದ್ದರು