ಬನವಾಸಿ ಪಟ್ಟಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಆಗ್ರಹ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಬನವಾಸಿ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಬನವಾಸಿ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಗಳನ್ನು ಅಳವಡಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಪಟ್ಟಣದಲ್ಲಿ ವಾಹನ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದ್ದು ಕಾನೂನು ಉಲ್ಲಂಘನೆ, ಅಪರಾಧ ಪ್ರಕರಣಗಳೂ ನಡೆಯುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಜನರ ಚಟುವಟಿಕೆಗಳ ಮೇಲೆ ನಿಗಾ ಇಡಲು ಇಲ್ಲಿ ಸಿಸಿಟಿವಿ ಕ್ಯಾಮೆರಾಗಳಿಲ್ಲ. ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾದುಹೋಗಿದ್ದು ಇಕ್ಕಟ್ಟಾದ ತಿರುವು ಹಾದಿಗಳು ಮತ್ತು ಸಣ್ಣ ಸಣ್ಣ ಕಿರು ಬೀದಿಗಳು ಸಂಚಾರ ದಟ್ಟಣೆಯನ್ನು ಹೆಚ್ಚಿಸಿದೆ.

ಕಾನೂನು ಉಲ್ಲಂಘನೆ, ಜನರ ಕಣ್ಣು ತಪ್ಪಿಸಿ ನಡೆಯುವ ಅಕ್ರಮ ಚಟುವಟಿಕೆಗಳು, ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಇತ್ತೀಚಿನ ದಿನಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಪ್ರಮುಖ ಪಾತ್ರವಹಿಸುತ್ತಿವೆ. ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳ ಜಾಡನ್ನು ಹಿಡಿದು ಪೊಲೀಸರು ಅಪರಾಧಿಗಳನ್ನು ಪತ್ತೆಹಚ್ಚಿದ ಎಷ್ಟೋ ನಿದರ್ಶನಗಳು ನಮ್ಮ ಮುಂದಿವೆ.

- Advertisement -

ಇತ್ತೀಚಿನ ದಿನಗಳಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ವಾಹನ ಅಪಘಾತ, ಕಳ್ಳತನ ಹಾಗೂ ಆರ್ಥಿಕ ಅಪರಾಧ ಪ್ರಕರಣಗಳು ಹೆಚ್ಚು ಹೆಚ್ಚು ದಾಖಲಾಗುತ್ತಿದ್ದು ಸಾಮಾನ್ಯವಾಗಿ ಬಡ ಜನತೆಯೇ ವಂಚನೆಗೆ ಈಡಾಗುತ್ತಿದ್ದಾರೆ. ಬ್ಯಾಂಕ್‍ಗಳ ಬಳಿ ಹಣ ವಂಚಿಸುವ ಮಂದಿಯೂ ಸಕ್ರಿಯರಾಗಿದ್ದಾರೆ. ಕೆಲವು ಅಂಗಡಿಗಳ ಮಾಲೀಕರು ಸ್ವಂತ ಹಣ ಖರ್ಚು ಮಾಡಿ ತಮ್ಮ ಮಳಿಗೆಗಳಿಗೆ ಕ್ಯಾಮೆರಾಗಳನ್ನು ಅಳವಡಿಸಿಕೊಂಡಿರುವುದನ್ನು ಬಿಟ್ಟರೆ ಬೇರೆಲ್ಲೂ ಇಲ್ಲವಾಗಿದೆ.

ಪಟ್ಟಣದ ಪ್ರಮುಖ ಸ್ಥಳಗಳಾಗಿರುವ ಕದಂಬ ವೃತ್ತ, ಛತ್ರಪತಿ ಶಿವಾಸಿ ವೃತ್ತ, ಆಲದಮರ ವೃತ್ತ, ಪ್ರಾಥಮಿಕ ಆರೋಗ್ಯ ಕೇಂದ್ರ, ಬಸ್ ನಿಲ್ದಾಣ, ರಥಬೀದಿ ಮತ್ತು ಪಟ್ಟಣದ ಆರಂಭ ಮತ್ತು ಅಂತ್ಯದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಗ್ರಾಮ ಪಂಚಾಯಿತಿ ಚಿಂತನೆ ನಡೆಸಬೇಕಾಗಿದೆ. ಪಟ್ಟಣದಲ್ಲಿ ಅಪಘಾತ ಅಥವಾ ಇನ್ನಾವುದೇ ಅಪರಾಧಗಳು ಸಂಭವಿಸಿದಲ್ಲಿ ಪೊಲೀಸರು ಖಾಸಗಿ ಅಂಗಡಿಗಳ ಸಿಸಿಟಿವಿ ಕ್ಯಾಮೆರಾ ನೆಚ್ಚಿಕೊಂಡು ತನಿಖೆ ನಡೆಸಬೇಕಾದ ಪರಿಸ್ಥಿತಿ ಇದೆ. ಜನ ದಟ್ಟಣೆಯಲ್ಲಿ ಉಂಟಾಗುವ ಅಪರಾಧ ಪ್ರಕರಣಗಳನ್ನು ಸುಲಭವಾಗಿ ಗುರುತಿಸಲು ಪಟ್ಟಣದಲ್ಲಿ ಗ್ರಾಮ ಪಂಚಾಯಿತಿಯವರು ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂಬುದು ಸಾರ್ವಜನಿಕರ ಹಾಗೂ ಸ್ಥಳೀಯರ ಆಗ್ರಹವಾಗಿದೆ.


ಗ್ರಾಮ ಪಂಚಾಯಿತಿ ಎಲ್ಲ ಕಡೆ ಸಾಧ್ಯವಾಗದಿದ್ದರೂ ಪ್ರಮುಖ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಇವುಗಳು ಸೆರೆ ಹಿಡಿಯುವ ದೃಶ್ಯಗಳನ್ನು ಪೊಲೀಸ್ ಠಾಣೆಯಲ್ಲಿ ವೀಕ್ಷಿಸಲು ಸಾಧ್ಯವಾಗುವಂತೆ ಮಾಡಬೇಕು. ಇದರಿಂದಾಗಿ ಪಟ್ಟಣದಲ್ಲಿ ನಡೆಯುವ ಅಪರಾಧಗಳನ್ನು ಕಂಡುಹಿಡಿಯಲು ಹಾಗು ತಡೆಗಟ್ಟಲು ಅನುಕೂಲವಾಗಲಿದೆ.

ಸುಕುಮಾರ ಆರೇರ
ಸ್ಥಳೀಯ ನಿವಾಸಿ.


ಬನವಾಸಿಯು ಐತಿಹಾಸಿಕ ಸ್ಥಳವಾಗಿರುವುದರಿಂದ ಮತ್ತು ಜಿಲ್ಲಾ ಗಡಿ ಭಾಗವಾಗಿರುವುದರಿಂದ ಬೇರೆ ಬೇರೆ ಕಡೆಗಳಿಂದ ಬಂದು ಅಪರಾಧ ಕೃತ್ಯ ನಡೆಸುತ್ತಾರೆ. ಸಿಸಿಟಿವಿ ಕ್ಯಾಮೆರಾಗಳಿಂದ ಅಪರಾಧ ಚಟುವಟಿಕೆಗಳ ಮೇಲೆ ಪೊಲೀಸರಿಗೆ ನಿಗಾ ಇಡಲು ಹಾಗೂ ಕಾನೂನು ಸುವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲೂ ಅನುಕೂಲವಾಗಲಿದೆ. ಶೀಘ್ರ ಸಿಸಿ ಕ್ಯಾಮೆರಾ ಅಳವಡಿಸುವ ಬಗ್ಗೆ ತಾಲೂಕು ಆಡಳಿತ ಯೋಜನೆ ರೂಪಿಸಬೇಕು. ಈಗಾಗಲೇ ಅಂಗಡಿಗಳ ಮಾಲೀಕರಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಸೂಚನೆ ನೀಡಲಾಗಿದೆ. ಗ್ರಾಮ ಪಂಚಾಯಿತಿ ಸಿಸಿಕ್ಯಾಮೆರಾ ಅಳವಡಿಸಿದಲ್ಲಿ ಪೊಲೀಸ್ ಇಲಾಖೆಗೆ ಅನುಕೂಲವಾಗಲಿದೆ.

ಹನುಮಂತ ಬಿರಾದಾರ
ಪಿಎಸ್‍ಐ ಬನವಾಸಿ ಪೊಲೀಸ್ ಠಾಣೆ


ಗ್ರಾಮ ಪಂಚಾಯಿತಿಯು ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಯೋಜನೆ ರೂಪಿಸಿದೆ. ಜನ ದಟ್ಟಣೆ ಇರುವ ಪ್ರದೇಶ ಗುರುತಿಸಿ ಅಗತ್ಯ ಇರುವ ಕಡೆ ಹಂತ ಹಂತವಾಗಿ ಕ್ಯಾಮೆರಾ ಅಳವಡಿಸಲಾಗುವುದು. ಇದಕ್ಕಾಗಿ ಅನುದಾನದ ಅಗತ್ಯವಿದ್ದು, ಈ ಬಗ್ಗೆ ಉನ್ನತಾಧಿಕಾರಿಗಳು ಮತ್ತು ಪೊಲೀಸ್ ಮುಖ್ಯಸ್ಥರೊಡನೆ ಚರ್ಚಿಸಿ ಶೀಘ್ರ ಕ್ರಮ ವಹಿಸಲಾಗುವುದು.

ಪರಶುರಾಮ್
ಪಂಚಾಯತ್ ಅಭಿವೃದ್ದಿ ಅಧಿಕಾರಿ ಗ್ರಾಪಂ ಬನವಾಸಿ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!