spot_img
spot_img

ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವಚಿತೆ ಆಗ್ರಹಿಸಿ ಮನವಿ

Must Read

- Advertisement -

ಮೂಡಲಗಿ: ಮೂಡಲಗಿ ತಾಲೂಕಿನ ಹಾಗೂ ಅರಭಾವಿ ಕ್ಷೇತ್ರದಲ್ಲಿ ಘಟಪ್ರಭಾ ನದಿಯ ಪ್ರವಾಹದಿಂದ ರೈತರ ಬದುಕು ಆತಂಕದಲ್ಲಿ ಇದ್ದು. ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಮಂಜುನಾಥ ಜಲ್ಲಿ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಮೂಡಲಗಿ ತಹಶೀಲ್ದಾರ ಕಚೇರಿಯ ಶಿರೇಸ್ತೆದಾರ ಪರುಶರಾಮ ನಾಯಕ ಅವರು ಮುಖಾಂತರ ಜಿಲ್ಲಾಧಿಕಾರಿಗಳಿಗೆ ಸೋಮವಾರದಂದು ಮನವಿಸಲ್ಲಿಸಿದರು.

ರಾಜ್ಯ ಮತ್ತು ಕೇಂದ್ರ ಸರಕಾರ ಬೆಳೆಹಾನಿ ಮತ್ತು ಮುಂತಾದ ತೊಂದರೆಗಳಿಗೆ ಶಾಶ್ವತ ಪರಿಹಾರ ಕೊಡುವಲ್ಲಿ ಎನ್.ಡಿ.ಆರ್.ಎಸ್.ನ ಮಾರ್ಗಸೂಚಿಯು ಸಂಪೂರ್ಣ ಅವೈಜ್ಞಾನಿಕವಾಗಿದೆ ಅದರಿಂದ ಯೋಗ್ಯವಾದ ಪರಿಹಾರ ರೈತರಿಗೆ ಸಿಗಲಿಕ್ಕೆ ಸಾದ್ಯವಿಲ್ಲ ಹಾಗೂ ರೈತರ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು  ಘಟಪ್ರಭಾ ನದಿ ತೀರದ ಸುಮಾರು ೩೦ ಗ್ರಾಮಗಳಿಗೆ ರೈತರಿಗೂ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಿದೆ, ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ನಾಶವಾಗಿವೆ ನೀರು ನುಗ್ಗಿ ಮನೆಗಳು ಸಹ ಹಾಳಾಗಿವೆ ಹೀಗಾಗಿ ಶೀಘ್ರವಾಗಿ ಸಮೀಕ್ಷೆ ನಡೆಸಿ ಹಾನಿಗೊಳಗಾದ ಕುಟುಂಬಸ್ಥರಿಗೆ ಸರಕಾರದ ಪರಿಹಾರ ಧನವನ್ನು ನಿಜವಾದ ಫಲಾನುಭವಿಗಳಿಗೆ ನೀಡಬೇಕು ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಎತ್ತರದ ಪ್ರದೇಶದಲ್ಲಿ
ಸ್ಥಳಾಂತರ ಮಾಡಿ ಆ ಗ್ರಾಮದಲ್ಲಿ ವಾಸಿಸುವ ಕುಟುಂಬಗಳಿಗೆ ಮನೆಗಳನ್ನ ನಿರ್ಮಾಣ ಮಾಡಿಕೊಡಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.

ಈ ಸಮಯದಲ್ಲಿ ಸಿದ್ದು ಕಂಕನವಾಡಿ, ಮಲ್ಲಿಕಾರ್ಜುನ ಮರಕುಂಬಿ, ಸಿದ್ದಮ್ಮ ಕಟ್ಟಿಕಾರ, ಲಕ್ಷ್ಮಿ ಹಾದಿಮನಿ ಮತ್ತಿತರರು  ಇದ್ದರು.

- Advertisement -
- Advertisement -

Latest News

ಮನ ಸೆಳೆದ ಶಾಂತಲಾ ಆರ್ಟ್ ಗ್ರೂಪ್ ಶೋ

ಕಲಾವಿದನು ಮೂಲತಃ ಸೌಂದರ್ಯ ಆರಾಧಕ ಹಾಗೂ ಸೌಂದರ್ಯವನ್ನು ಪ್ರೀತಿಸುವವನು. ಪ್ರಕೃತಿ ಸೌಂದರ್ಯಮಯ ಕಲೆ ಆನಂದಮಯ ಅನ್ನುವಂತೆ ಕಲಾವಿದನು ದೃಶ್ಯಗಳ ನಕಲನ್ನು ಮಾಡಲಾರ ಹಾಗೂ ತನ್ನೊಳಗಿನ ವಿಚಾರ...
- Advertisement -

More Articles Like This

- Advertisement -
close
error: Content is protected !!
Join WhatsApp Group