ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಎಐಟಿಯುಸಿ ಯಿಂದ ಆಗ್ರಹ

Must Read

ಸಿಂದಗಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರ, ಹಾಸ್ಟೆಲ್ ಕಾರ್ಮಿಕರು ದುಡಿಯುವ ಜನರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಆಲ್ ಇಂಡಿಯಾ ಯೂನೈಟೆಡ್ ಟ್ರೇಡ್ ಯೂನಿಯನ್ ಸೆಂಟರ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಶಾಸಕ ಅಶೋಕ ಮನಗೂಳಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾದೇವಿ ಧರ್ಮಶೆಟ್ಟಿ ಮಾತನಾಡಿ, ಒಳ್ಳೆಯ ದಿನಗಳನ್ನು ಕೊಡುವುದಾಗಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರವು ಹಿಂದಿನ ಸರ್ಕಾರಗಳು ಅನುಸರಿಸಿದ ನೀತಿಗಳನ್ನೇ ಬಹಳ ವೇಗವಾಗಿ ಜಾರಿಗೊಳಿಸುತ್ತಾ, ಅದರಲ್ಲೂ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿರುವುದು ಅತ್ಯಂತ ನೋವಿನ ವಿಚಾರ, ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ದುಡಿಯುವವರು ತೀವ್ರವಾದ ಬಾಧೆಗೆ ತುತ್ತಾಗಿದ್ದಾರೆ. ತ್ಯಾಗ ಬಲಿದಾನಗಳಿಂದ ಗಳಿಸಿದ ಅವರ ಎಲ್ಲಾ ಹಕ್ಕುಗಳು ಇನ್ನಿಲ್ಲವಾಗುತ್ತಿದೆ. ಖಾಯಂ ಉದ್ಯೋಗಗಳು ತೀವ್ರವಾಗಿ ಕಡಿತವಾಗುತ್ತಿವೆ. ಹೊರ ಗುತ್ತಿಗೆ, ವಿವಿಧ ರೀತಿಯ ಗುತ್ತಿಗೆ ಕೆಲಸಗಳು, ನಿಗದಿತ ಅವಧಿಗೆ ಮಾತ್ರ ಉದ್ಯೋಗ… ಇತ್ಯಾದಿಗಳು ಸಾರ್ವಜನಿಕ ಉದ್ಯಮಗಳನ್ನು ಜನಹಿತಕ್ಕೆ ವಿರುದ್ಧವಾಗಿ ಖಾಸಗೀಕರಿಸಲಾಗುತ್ತಿದೆ. ದುಡಿಯುವ ಜನರ ವೇತನ ಜೀವನವೆಚ್ಚಕ್ಕೆ ಹೋಲಿಸಿದರೆ ಕ್ಷೀಣಿಸುತ್ತಿದೆ. ಸೇವಾಭದ್ರತೆ ಮಾಯವಾಗುತ್ತಿದೆ. 2015 ರಿಂದಲೂ ನಡೆಸೇ ಇಲ್ಲ. ಯಾವುದೇ ಚರ್ಚೆ, ಸಮಾಲೋಚನೆ ಇಲ್ಲದೇ ಎಲ್ಲಾ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ `ಕಾರ್ಮಿಕ ಸಂಹಿತೆ ಗಳನ್ನು ಜಾರಿಗೆ ತಂದಿದೆ. ಕಾರ್ಮಿಕರ ದುಡಿಮೆಯ ಆರೋಗ್ಯ ಹಾಗೂ ಸುರಕ್ಷತೆಯನ್ನು ಖಾತರಿಪಡಿಸುವ ಬದಲಿಗೆ ಸರ್ಕಾರವು ಕೆಲಸದ ಸ್ಥಳಗಳನ್ನು ಪರಿಶೀಲಿಸುವ ಕಾರ್ಯದಿಂದ ದೂರ ಸರಿಯುತ್ತಿದೆ. ಹೊಸ ಪಿಂಚಣಿ ಯೋಜನೆ ವಿರೋಧಿಸಿ, ಹಳೇ ಪಿಂಚಣಿ ಯೋಜನೆ ಪುನರ್ ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಕಡೆಗಣಿಸಲಾಗುತ್ತಿದೆ. ಇನ್ನು ಗ್ರಾಮೀಣ ಭಾಗದ ಕೃಷಿ ಕಾರ್ಮಿಕರು, ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರು ಇತ್ಯಾದಿ ಅಸಂಘಟಿತ ಕಾರ್ಮಿಕರ ಪರಿಸ್ಥಿತಿ ಶೋಚನೀಯವಾಗಿದೆ. ಇದರಿಂದ 15-21 ರವರೆಗೆ ದೇಶವ್ಯಾಪಿ ಪ್ರತಿಭಟನಾ ಸಪ್ತಾಹಕ್ಕೆ ಕರೆ ನೀಡಿರುವ ಈ ಸಂದರ್ಭದಲ್ಲಿ ಈ ಕೆಳಗಿನ ಹಕ್ಕೊತ್ತಾಯಗಳನ್ನು ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಶಾಸಕ ಅಶೋಕ ಮನಗೂಳಿ ಮಾತನಾಡಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರ, ಹಾಸ್ಟೆಲ್ ಕಾರ್ಮಿಕರು ದುಡಿಯುವ ಜನರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಆಲ್ ಇಂಡಿಯಾ ಯೂನೈಟೆಡ್ ಟ್ರೇಡ್ ಯೂನಿಯನ್ ಸೆಂಟರ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು ಕಾನೂನಾತ್ಮಕವಾಗಿದೆ. ಈ ಸಮಸ್ಯೆ ಕುರಿತಂತೆ ಮುಖ್ಯಮಂತ್ರಿಗಳ ಹಾಗೂ ಸಂಬಂದಪಟ್ಟ ಸಚಿವರ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮಕ್ಕಾಗಿ ಪ್ರಯತ್ನಿಸಿ ತಮ್ಮ ಬೇಡಿಕೆಗೆ ಸ್ಪಂದಿಸುವದಾಗಿ ಭರವಸೆ ನೀಡಿದರು.

ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಮನವಿಗೆ ಸ್ಪಂಧಿಸಿದರು. 

ಈ ಸಂದರ್ಭದಲ್ಲಿ ಎಐಯುಟಿಯುಸಿನ ಕಾರ್ಯಕರ್ತೆಯರಾದ ರಷ್ಮೀ, ಸರಸ್ವತಿ ಕೊಟ್ಯಾಳ, ನಾಗಮ್ಮ ಎಮ್ಮಿ, ರೂಪಾ, ರೇಣುಕಾ, ಸಂಗಮ್ಮ, ಬಾಲಾಬಾಯಿ ಹೂಗಾರ ಸೇರಿದಂತೆ ಅನೇಕರು ಇದ್ದರು.

Latest News

ಕಾಂಗ್ರೆಸ್ ಶಾಸಕರ ಮಾತುಗಳು ಹೇಸಿಗೆ ತರಿಸುತ್ತವೆ – ಭಗವಂತ ಖೂಬಾ

ಬೀದರ - ಪ್ರಸಕ್ತ ಮುಖ್ಯಮಂತ್ರಿ ಗಳು, ಮಂತ್ರಿಗಳು, ಶಾಸಕರು ಸದನದಲ್ಲಿ ಆಡುವ ಭಾಷೆ ಹೇಸಿಗೆ ತರುವಂತಿದೆ. ನನ್ನ ರಾಜಕೀಯ ಜೀವನದಲ್ಲಿ ಇಂಥಾ ಭಾಷೆಯನ್ನು ನೋಡಿಲ್ಲ. ಒಬ್ಬ...

More Articles Like This

error: Content is protected !!
Join WhatsApp Group