ದಲಿತರ ಹಣ ಗ್ಯಾರಂಟಿಗಳಿಗೆ ಬಳಸಿದ ಕಾಂಗ್ರೆಸ್ ; ತನಿಖೆ ಮಾಡಿಸಬೇಕು – ಈರಣ್ಣ ಕಡಾಡಿ ಆಗ್ರಹ

Must Read

ಮೂಡಲಗಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಮೀಸಲಾದ ಅನುದಾನದ ಹಣವನ್ನು ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸಿಕೊಂಡಿದ್ದು, ಅದು ದಲಿತ ಸಮುದಾಯಕ್ಕೆ ಬಗೆದ ಮಹಾ ದ್ರೋಹವಾಗಿದೆ. ದಲಿತರ ಬಜೆಟ್ ಅನುದಾನವನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿಕೊಂಡ ಕ್ರಮವನ್ನು ಕೇಂದ್ರ ಸರ್ಕಾರ ತನಿಖೆಗೆ ಒಳಪಡಿಸಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ರಾಜ್ಯಸಭೆಯಲ್ಲಿ ಆಗ್ರಹಿಸಿದರು.

2023ರಲ್ಲಿ, ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳ ಘೋಷಣೆಗಳ ಆಧಾರದ ಮೇಲೆ ಕರ್ನಾಟಕದಲ್ಲಿ ಚುನಾವಣೆಯನ್ನು ಎದುರಿಸಿ ಅಧಿಕಾರಕ್ಕೆ ಬಂದಿದೆ. ಆದರೆ ಈಗ ಅದೇ ಐದು ಗ್ಯಾರಂಟಿಗಳು ರಾಜ್ಯ ಬಜೆಟ್ ಮೇಲೆ ರೂ. 52,000 ಕೋಟಿ ಹೊರೆಯಾಗಿವೆ. ಈ ಬೃಹತ್ ವೆಚ್ಚವನ್ನು ಸರಿದೂಗಿಸಲು ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಪನ್ಮೂಲಗಳಿಲ್ಲ ಎಂಬುದು ಸ್ಪಷ್ಟವಾಗಿದೆ. ಹೀಗಾಗಿ ಎಸ್.ಸಿ.ಎಸ್.ಪಿ(ಪರಿಶಿಷ್ಟ ಜಾತಿ ಉಪ-ಯೋಜನೆ) ಮತ್ತು ಟಿ.ಎಸ್.ಪಿ (ಬುಡಕಟ್ಟು ಉಪ-ಯೋಜನೆ)ಯ ಹಣವನ್ನು ಗ್ಯಾರಂಟಿ ಯೋಜನೆಗೆ ವಿನಿಯೋಗಿಸಲಾಗಿದೆ ಎಂದರು.

ರಾಜ್ಯದ ಬಜೆಟ್‌ನ ಶೇ24 ರಷ್ಟು ಹಣವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯ ಅಭಿವೃದ್ದಿಗಾಗಿ ಮೀಸಲಿಡಬೇಕೆಂಬ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಕನಸನ್ನು ಕಾಂಗ್ರೆಸ್ ಸರ್ಕಾರ ನುಚ್ಚುನೂರು ಮಾಡಿದ್ದು 2024-25ನೇ ಸಾಲಿನ ಎಸ್.ಸಿ.ಎಸ್.ಪಿ /ಟಿ.ಎಸ್.ಪಿ ಯೋಜನೆಗೆ ಬಜೆಟ್‌ನಲ್ಲಿ ಒಟ್ಟು ರೂ.37,648.72ಕೋಟಿಯಲ್ಲಿ ಮೀಸಲಿಡಲಾಗಿದ್ದು, ಅದರಲ್ಲಿ ರೂ.14,730.53 ಕೋಟಿ ಅಂದರೇ ಸರಿಸುಮಾರು ಶೇ 28% ರಷ್ಟು ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲಾಗಿದೆ. ಇದು ಕೇವಲ ಆರ್ಥಿಕ ಅನ್ಯಾಯವಲ್ಲ, ಬದಲಾಗಿ ಭಾರತದ ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ತತ್ವಗಳ ಉಲ್ಲಂಘನೆ ಯಾಗಿದೆ ಎಂದರು.

ಈ ಅನುದಾನವನ್ನು ಇತರ ಯೋಜನೆಗಳಿಗೆ ಖರ್ಚು ಮಾಡುವುದು ಈ ಸಮುದಾಯಗಳ ಹಕ್ಕುಗಳ ಉಲ್ಲಂಘನೆ ಮಾತ್ರವಲ್ಲದೆ, ಈ ವರ್ಗಗಳು ಪ್ರಜಾಪ್ರಭುತ್ವ ಮತ್ತು ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆಗೆ ಮಾಡಿದ ಅವಮಾನ ಮತ್ತು ದ್ರೋಹ ಆಗಿದೆ ಎಂದು ಆರೋಪಿಸಿದರು

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ದಲಿತರು ಮತ್ತು ಬುಡಕಟ್ಟು ಜನಾಂಗದವರಿಗೆ ರಕ್ಷಣೆ ನೀಡಿದ್ದರು ಆದರೆ ಕಾಂಗ್ರೆಸ್ ಸರ್ಕಾರವು ಈ ಸಮುದಾಯಗಳಿಗೆ ಮೀಸಲಾದ ಮೊತ್ತವನ್ನು ತನ್ನ ರಾಜಕೀಯ ಯೋಜನೆಗಳಿಗೆ ಖರ್ಚು ಮಾಡುವ ಮೂಲಕ ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ 4% ರಷ್ಟು ಮೀಸಲಾತಿ ನೀಡುವ ನಿರ್ಣಯ ಕೈಗೊಂಡಿದೆ ಇದು ಸಂವಿಧಾನಬಾಹಿರ ನಡೆಯಾಗಿದೆ ಮತ್ತು ದಲಿತರಿಗೆ, ಆದಿವಾಸಿಗಳಿಗೆ ಅನ್ಯಾಯವೆಸಗಿದೆ. ಕರ್ನಾಟಕ ವಿಧಾನಸಭೆಯಲ್ಲಿ ಈ ವಿಷಯದ ಬಗ್ಗೆ ಧ್ವನಿ ಎತ್ತಿದಾಗ 18 ಬಿಜೆಪಿ ಶಾಸಕರು 6 ತಿಂಗಳ ಕಾಲ ಅಮಾನತುಗೊಳಿಸಲಾಗಿದೆ, ಇದು ಪ್ರಜಾಪ್ರಭುತ್ವದ ಕೊಲೆಗೆ ಸಮಾನವಾಗಿದೆ. ಆದ್ದರಿಂದ ಕೇಂದ್ರ ಸರ್ಕಾರವು ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಧರ್ಮಾಧಾರಿತ ಮೀಸಲಾತಿಯನ್ನು ತಕ್ಷಣವೇ ನಿಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದರು..

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...

More Articles Like This

error: Content is protected !!
Join WhatsApp Group