ಡಿಜಿಟಲ್ ಕ್ಲಾಸ್ ರೂಮ್ ಉದ್ಘಾಟನೆ

Must Read

ಹುನಗುಂದ : ತಾಲೂಕಿನ ಚಿತ್ತವಾಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 08 ರ ಸೋಮವಾರದಂದು “ಡಿಜಿಟಲ್ ಸ್ಮಾರ್ಟ್ ಕ್ಲಾಸ್ ರೂಮ್” ಉದ್ಘಾಟನೆ ಹಮ್ಮಿಕೊಳ್ಳಲಾಯಿತು.

“JSW ಫೌಂಡೇಶನ್ ಹಾಗೂ JSW ಎನರ್ಜಿ” ಸಂಸ್ಥೆಯವರು ನಲಿ ಕಲಿ ಕೋಣೆಯನ್ನು “ಡಿಜಿಟಲ್ ಸ್ಮಾರ್ಟ್ ಕ್ಲಾಸ್ ರೂಮ್” ಆಗಿ ಪರಿವರ್ತಿಸಲು ಅಗತ್ಯವಿರುವ ಎಲ್ಲ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದ್ದಕ್ಕೆ JSW ಸಂಸ್ಥೆಯ ಅಧಿಕಾರಿಗಳಿಗೆ ಸನ್ಮಾನಿಸಲಾಯಿತು.

ಸ್ಮಾರ್ಟ್ ಕ್ಲಾಸನ್ನು ಉದ್ಘಾಟಿಸಿ ಮಾತನಾಡಿದ JSW ಸಂಸ್ಥೆಯ ಅಧಿಕಾರಿಗಳು ಇಂದಿನ ಡಿಜಿಟಲ್ ಯುಗದಲ್ಲಿ ಶಿಕ್ಷಣದಲ್ಲಿ ತಂತ್ರಜ್ಞಾನ ಅತೀ ಮುಖ್ಯವಾದ ಪಾತ್ರವಹಿಸುತ್ತಿದೆ. ಸ್ಮಾರ್ಟ್ ಕ್ಲಾಸ್ ಗಳು ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದರು. ಈ ಮೂಲಕ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವಲ್ಲಿ ನಮ್ಮ ಸಂಸ್ಥೆ ಯಾವಾಗಲೂ ಸಿದ್ಧವಾಗಿರುತ್ತದೆ ಎಂದು ತಮ್ಮ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದರು.

ಹುನಗುಂದ ತಾಲೂಕ ಶಿಕ್ಷಣಾಧಿಕಾರಿ ಶ್ರೀಮತಿ ಜಾಸ್ಮಿನ್ ಕಿಲ್ಲೇದಾರರವರು ಮಾತನಾಡುತ್ತಾ ಸ್ಮಾರ್ಟ್ ಕ್ಲಾಸ್ ಗಳ ಮೂಲಕ ಪಾಠಗಳು ಚಿತ್ರ, ಧ್ವನಿ, ವಿಡಿಯೋಗಳ ಸಹಾಯದಿಂದ ಸುಲಭವಾಗಿ ಅರ್ಥವಾಗುತ್ತವೆ ಹಾಗೂ ಹೆಚ್ಚು ದಿನಗಳ ಕಾಲ ಮಕ್ಕಳ ನೆನಪಿನಲ್ಲಿ ಉಳಿಯುತ್ತವೆ ಎಂದರು. ಸರ್ಕಾರಿ ಶಾಲೆಗಳನ್ನು ಸ್ಮಾರ್ಟ್ ಕ್ಲಾಸ್ ಗಳನ್ನಾಗಿ ಪರಿವರ್ತಿಸುವ ಮೂಲಕ ನಮ್ಮ ಇಲಾಖೆಗೆ ನೆರವಾಗುತ್ತಿರುವ JSW ಸಂಸ್ಥೆಯ ಕೊಡುಗೆಯನ್ನು ಶ್ಲಾಘಿಸಿದರು.

ಅದೇ ರೀತಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹುನಗುಂದ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಗುಡಗುಂಟಿ ರವರು ಮಾತನಾಡುತ್ತಾ ಹಳ್ಳಿಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸ್ಮಾರ್ಟ್ ಕ್ಲಾಸ್ ಗಳು ಅತ್ಯಗತ್ಯವಾಗಿವೆ ಶಿಕ್ಷಕರು ಇವುಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಶಾಲೆಯ SDMC ಹಾಗೂ ಗ್ರಾಮದ ದಾನಿಗಳು ಕಾರ್ಯಕ್ರಮದ ಎಲ್ಲಾ ಆವ್ಹಾನಿತರಿಗೆ ರುಚಿ ಕಟ್ಟಾದ ಭೋಜನ ವ್ಯವಸ್ಥೆಯನ್ನು ಕಲ್ಪಿಸಿದರು.

ಈ ಕಾರ್ಯಕ್ರಮದಲ್ಲಿ SDMC ಅಧ್ಯಕ್ಷರು,ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮಸ್ಥರು ಹಾಗೂ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group