ಕಾಂಗ್ರೆಸ್ ನಿಂದ ಡಿಜಿಟಲ್ ಸದಸ್ಯತ್ವ ನೋಂದಣಿ

Must Read

ಬೀದರ – ಪಂಚರಾಜ್ಯ ಚುನಾವಣಾ ಫಲಿತಾಂಶ ಕ್ಕೂ ಕರ್ನಾಟಕಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಹೇಳಿದರು.

ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೊಂದಣಿ ಪರಿಶೀಲನೆ ಸಭೆ ಉದ್ಘಾಟನಾ ಸಮಾರಂಭದಲ್ಲಿ ಬಾಗಿಯಾಗಿ ಅವರು ಮಾತನಾಡಿದರು.

ಕೆಪಿಸಿಸಿ ರಾಜ್ಯ ಅಧ್ಯಕ್ಷ ಡಿ ಕೆ ಶಿವಕುಮಾರಗೆ ಕೆಪಿಸಿಸಿ ರಾಜ್ಯ ಕಾರ್ಯದ್ಯಕ್ಷ ಈಶ್ವರ ಖಂಡ್ರೆ ಸಾಥ್ ನೀಡಿದರು.

ಪಂಜಾಬ್ ನಲ್ಲಿ ಆಪ್ದಿದೆ. ಗೋವಾದಲ್ಲಿ ೨ ಸೀಟು ಇದ್ದ ಕಾಂಗ್ರೆಸ್ ೧೨ ಸೀಟು ಗೆದ್ದಿದೆ ಅದಕ್ಕಾಗಿ ಗಾಬರಿಯಾಗಬೇಕಾದ ಕಾರಣವಿಲ್ಲ. ಮುಂದೆ ನಾವು ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯುವುದು ಗ್ಯಾರಂಟಿ ಎಂದರು.

ನಗರದ ಹೋಟೆಲ್ ಎ ಕೆ ಕಾಂಟಿನೆಂಟಲ್ ನಲ್ಲಿ ಕಾಂಗ್ರೆಸ್ ಪಕ್ಷ ಡಿಜಿಟಲ್ ಸದಸ್ವತ್ವ ನೋಂದಣಿ ಅಭಿಯಾನ ಪ್ರಗತಿ ಪರಿಶೀಲನೆ ಸಭೆಯನ್ನು ಸಸಿಗೆ ನೀರೆಯವ ಮೂಲಕ ಉದ್ಘಾಟಿಸಲಾಯಿತು.

ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ವಿಧಾನ ಸೌಧದ ಮೆಟ್ಟಿಲ ಮೇಲೆ ನೀವು ಕಾಂಗ್ರೆಸ್ ಧ್ವಜ ಹಿಡಿದು ತಿರುಗಾಡೋದು ಮಾಡಬಹುದು ಎಂದ ಅವರು ರಹೀಂ ಖಾನ್ ಅವರನ್ನು ಹೀಗಳೆದು, ನೀನು ನನ್ನ ಶಿಷ್ಯ ಅನ್ನೋಕೆ ನನಗೆ ಅವಮಾನವಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಅನೇಕ ಮುಖಂಡರು ಉಪಸ್ಥಿತರಿದ್ದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group