spot_img
spot_img

ಮೋದಿ ಸರ್ಕಾರದ ಪುರಸ್ಕೃತ ಯೋಜನೆಗಳ ನೇರ ಸಂವಾದ ಕಾರ್ಯಕ್ರಮ

Must Read

ಬೀದರ – ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಕೈಗೊಳ್ಳಲಾದ ಅನೇಕ ಜನಪರ ಕಾರ್ಯಕ್ರಮಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮದ ವೀಕ್ಷಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರ ರಂಗಮಂದಿರ ನಲ್ಲಿ ಸಂವಾದ ಕಾರ್ಯಕ್ರಮ ವೀಕ್ಷಣೆಯನ್ನು ಜಿಲ್ಲಾ ಆಡಳಿತ ವತಿಯಿಂದ ವ್ಯವಸ್ಥೆ ಮಾಡಲಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಶಂಕರ್ ಬಿ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮವನ್ನು ಫಲಾನುಭವಿಗಳು ನೇರವಾಗಿ ವೀಕ್ಷಿಸಿದರು.

ಈ ನೇರ ಸಂವಾದ ಕಾರ್ಯಕ್ರಮದಲ್ಲಿ ನೂರಾರು ಫಲಾನಭವಿಗಳು ಭಾಗಿಯಾಗಿದ್ದು ದೇಶದ ವಿವಿಧ ಭಾಗಗಳ ಫಲಾನುಭವಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು.

ರಂಗ ಮಂದಿರದಲ್ಲಿ ವಿಶಾಲ ಪರದೆಯ ಮೇಲೆ ಎಲ್ಲರಿಗೂ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗಿತ್ತು. ಪ್ರಧಾನಿ ಮೋದಿ ತಮ್ಮ ಸರ್ಕಾರದ ಅನೇಕ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ವಿವರಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಶಿಕ್ಷಕರ ಸೇವಾ ಪುಸ್ತಕ ಸರಿಪಡಿಸಲು “ಗುರುಸ್ಪಂದನ” ಕಾರ್ಯಕ್ರಮ ಆಯೋಜಿಸಿ; ಭೂಸನೂರ

ಸಿಂದಗಿ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಪುಸ್ತಕಗಳು  ಅಪೂರ್ಣವಾಗಿರುವ ಸೇವಾ ವಿವರ ಹಾಗೂ ಮಾಹಿತಿಯನ್ನು ಪೂರ್ಣಗೊಳಿಸಲು "ಗುರುಸ್ಪಂದನ" ಕಾರ್ಯಕ್ರಮವನ್ನು  ಆಯೋಜಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ...
- Advertisement -

More Articles Like This

- Advertisement -
close
error: Content is protected !!