spot_img
spot_img

ಆಸ್ಪತ್ರೆ ಕಟ್ಟಡ ಕಾಮಗಾರಿ ಶೀಘ್ರ ಆರಂಭಿಸಲು ಕಡಾಡಿ ಸೂಚನೆ

Must Read

spot_img
- Advertisement -

ಬೆಳಗಾವಿ: ಕೇಂದ್ರ ಸರ್ಕಾರವು ಬೆಳಗಾವಿ ನಗರದಲ್ಲಿ ಪ್ರಸ್ತುತ ಇರುವ ರಾಜ್ಯ ಕಾರ್ಮಿಕ ವಿಮಾ ನಿಗಮದ 50 ಹಾಸಿಗೆಗಳ ಆಸ್ಪತ್ರೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಕೇಂದ್ರ ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನದಡಿ ಟೆಂಡರ ಪ್ರಕ್ರಿಯೆ ಮುಗಿದು ಹಲವು ತಿಂಗಳು ಕಳೆದರು ಇದುವರೆಗೆ ಕಾಮಗಾರಿ ಪ್ರಾರಂಭಗೊಂಡಿರುವುದಿಲ್ಲ ಆದಷ್ಟು ಬೇಗನೇ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸೂಚಿಸಿದರು.

ಬುಧವಾರ ನ-13 ರಂದು ನಗರದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ರಾಜ್ಯ ಕಾರ್ಮಿಕ ವಿಮಾ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಕಾ.ರಾ.ವಿ. ಆಸ್ಪತ್ರೆ ಬೆಳಗಾವಿ. ಕಟ್ಟಡದ ಸ್ಥಳಾಂತರ ಮಾಡುವ ಕುರಿತು ನಾನು ಸೆಪ್ಟೆಂಬರ 2020 ರಿಂದ ಆಸಕ್ತಿ ವಹಿಸಿ, ಸಂಬಂಧಪಟ್ಟ ಮಂತ್ರಿಗಳನ್ನು ಅಧಿಕಾರಿಗಳನ್ನು ಭೇಟಿಯಾಗಿ ನೂತನ ಆಸ್ಪತ್ರೆ ನಿರ್ಮಿಸುವ ಕುರಿತು ಕೈಗೊಂಡ ಪ್ರಯತ್ನಗಳನ್ನು ಸಾಕಾರಗೊಳಿಸಲು ಆದಷ್ಟು ಬೇಗನೆ ಆಸ್ಪತ್ರೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ತಿಳಿಸಿದರು.

ಸದರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳನ್ನು ಬೆಳಗಾವಿಯಲ್ಲಿರುವ ಕಾರಾವಿ ಚಿಕಿತ್ಸಾಲಯಗಳಿಗೆ ಹಾಗೂ ಹತ್ತಿರದ ಹುಬ್ಬಳ್ಳಿ ಮತ್ತು ದಾಂಡೇಲಿಯ ಆಸ್ಪತ್ರೆಗಳಿಗೆ ತಾತ್ಕಾಲಿಕ ನಿಯೋಜನೆ ಮಾಡಿ, ಕಟ್ಟಡವನ್ನು ತೆರವುಗೊಳಿಸಿಕೊಟ್ಟಲ್ಲಿ, ಕಟ್ಟಡ ಕೆಡವುವ ಕಾಮಗಾರಿ ಹಾಗೂ ನಿರ್ಮಾಣ ಕಾಮಗಾರಿಯನ್ನು ಬೇಗನೇ ಮಾಡಬಹುದೆಂದು ಅಧಿಕಾರಿಗಳಿಗೆ ತಿಳಿಸಿದರು ಹಾಗೂ ಈ ವಿಷಯವನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯವರೊಂದಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಶೀಘ್ರವಾಗಿ ಕ್ರಮವಹಿಸಲು ಸೂಚಿಸಿದರು.

- Advertisement -

ವಿಒಟಿಸಿ ಹೊನಗಾ ಆಸ್ಪತ್ರೆ ಕಟ್ಟಡ ಮಾಲೀಕರು ಕಟ್ಟಡವನ್ನು ಇ.ಎಸ್.ಆಯ್ ಆಸ್ಪತ್ರೆಗೆ ಕೊಡಲು ಒಪ್ಪಿರುವ ಕಾರಣ, ಆ ಆಸ್ಪತ್ರೆಯನ್ನು ಸ್ಥಳಾಂತರಕ್ಕಾಗಿ ಪರಿಗಣಿಸುವಂತೆ ಸೂಚಿಸಿದರು ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಉಪ ಪ್ರಾದೇಶಿಕ ಕಚೇರಿಯನ್ನು ಬೆಳಗಾವಿ ಕೇಂದ್ರಸ್ಥಾನವನ್ನಾಗಿ, ವಿಜಯಪುರ, ಬಾಗಲಕೋಟೆ ಮತ್ತು ಉತ್ತರಕನ್ನಡ ಜಿಲ್ಲೆಗಳನ್ನು ಅದರ ವ್ಯಾಪ್ತಿಗೆ ತರಲು ಕ್ರಮ ವಹಿಸಬೇಕೆಂದು ಪ್ರಾದೇಶಿಕ ನಿರ್ದೇಶಕರಿಗೆ ಸೂಚಿಸಿದರು.

ಸಭೆಯಲ್ಲಿ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ ನಿರ್ದೇಶಕ ಡಾ. ವಿ. ವರದರಾಜು, ಪ್ರಾಂತೀಯ ನಿರ್ದೇಶಕರು ಹಾಗೂ ಹೆಚ್ಚುವರಿ ಆಯುಕ್ತರಾದ ರೇಣುಕಾ ಪ್ರಸಾದ ಟಿ, ಕಾರ್ಯನಿರ್ವಾಹಕ ಅಭಿಯಂತರ ವಿನೋದ ಖರ್ಕವಾಲ, ಉಪಪ್ರಾಂತಿಯ ಕಛೇರಿ ಉಪನಿರ್ದೇಶಕ ರಘುರಾಮನ, ಕೆ, ಕಾ.ರಾ.ವಿ. ಆಸ್ಪತ್ರೆ ಬೆಳಗಾವಿ ವೈದ್ಯಕೀಯ ಅಧೀಕ್ಷಕರಾದ ಮಂಜುನಾಥ ಕಳಸನ್ನವರ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ

ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group