ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ -ಸಂಸದ ಈರಣ್ಣ ಕಡಾಡಿ

Must Read

ಕುಡಿಯುವ ನೀರು ವ್ಯತ್ಯಯ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ ರುದ್ರೇಶ ಘಾಳೆ

ಬೆಳಗಾವಿ - ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಲು ನಡೆಸಿದ ಮುಷ್ಕರದಿಂದಾಗಿ ಬೆಳಗಾವಿ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗಿದ್ದು ವಿಷಾದನೀಯವಾಗಿದೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿ...

ಹೆಣ್ಣು ಮಕ್ಕಳು ಪೌಷ್ಠಿಕ ಆಹಾರ ಸೇವನೆ ಮಾಡಬೇಕು – ಡಾ.ನಯನಾ ಭಸ್ಮೇ

ಸವದತ್ತಿ - “ಹೆಣ್ಣು ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ಸದೃಢವಾಗಿರಬೇಕು ಅವರು ಹದಿ ಹರೆಯದ ವಯಸ್ಸಿಗೆ ಬಂದಾಗ ಅವರಲ್ಲಿ ನೈಸರ್ಗಿಕವಾದ ಬದಲಾವಣೆಗಳು ಆಗುತ್ತವೆ ಅಂತಹ ಸಂದರ್ಭದಲ್ಲಿಯೂ...

ಪ್ರೊ.ಅಲಕಾ ಕುರಣೆ ಯವರಿಗೆ ‘ ಶಿಕ್ಷಕ ಶ್ರೀ ‘ ರಾಜ್ಯ ಮಟ್ಟದ ಪ್ರಶಸ್ತಿ

ಬೆಳಗಾವಿ: ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ, ಧಾರವಾಡ ಬೆಂಗಳೂರು ಘಟಕದಿಂದ ನೀಡಲಾಗುವ ರಾಜ್ಯ ಮಟ್ಟದ ಶಿಕ್ಷಕ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಳಗಾವಿಯ...

ಮೂಡಲಗಿ: ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಟ ದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‍ಗಳನ್ನು ಭಾರತ ಸರ್ಕಾರ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿತರಿಸಿದರು.

ಮಂಗಳವಾರ ಆ.24 ರಂದು ಅರಭಾಂವಿ ವಿಧಾನಸಭಾ ಮತಕ್ಷೇತ್ರದ ಲೋಳಸೂರ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿ.ಜಿ, ಮಸಗುಪ್ಪಿ ಗ್ರಾಮಗಳಿಗೆ ತೆರಳಿ ಗ್ರಾಮ ಪಂಚಾಯತ ಆವರಣದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದ ಈರಣ್ಣ ಕಡಾಡಿ ಅವರು ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಒಳಗೊಂಡಂತೆ ವಿವಿಧ ವೃತ್ತಿಯಲ್ಲಿರುವ ಬಡವರಿಗೆ ಹಣಕಾಸು ಪ್ಯಾಕೇಜುಗಳನ್ನು ಘೋಷಣೆ ಮಾಡುವುದರ ಮೂಲಕ ಕಾರ್ಮಿಕರ ನೆರವಿಗೆ ನಿಂತ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಮೂಡಲಗಿ: ಲೋಳಸೂರ ಗ್ರಾಮ ಪಂಚಾಯತ ಆವರಣದಲ್ಲಿ ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‍ಗಳನ್ನು ವಿತರಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಗ್ರಾ.ಪಂ ಸದಸ್ಯರು, ಅಧಿಕಾರಿಗಳು ಇದ್ದರು.

- Advertisement -

ರಾಜ್ಯ ಕಾರ್ಮಿಕ ಇಲಾಖೆಯಿಂದ ನೀಡುವ ಕಾರ್ಮಿಕ ಕಾರ್ಡಿನಿಂದ ಅನೇಕ ಉಪಯೋಗಗಳಿವೆ. ಇದನ್ನು ಅರಿತು ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರೂ ಕೂಡ ಕಾರ್ಡಿಗೆ ಅರ್ಜಿ ಸಲ್ಲಿಸಿ ಇಲಾಖೆಯ ಯೋಜನೆಗಳ ಉಪಯೋಗ ಪಡೆಯಬೇಕೆಂದು ಹೇಳಿದರು.

ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಕರೋನಾ ಮೊದಲ ಅಲೆ ಮತ್ತು ಎರಡನೆಯ ಅಲೆಯಲ್ಲಿ ಪಿಎಂ ಗರೀಬ್ ಕಲ್ಯಾಣ ಅನ್ನಯೋಜನೆಯಡಿ 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ದೇಶದ 80 ಕೋಟಿ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿ ಮತ್ತು 1 ಕೆ.ಜಿ ಬೇಳೆ ಪಡಿತರವನ್ನು ಉಚಿತವಾಗಿ ಮೇ 2021 ರಿಂದ ನವೆಂಬರ್ 2021 ದೀಪಾವಳಿವರೆಗೆ ನೀಡಲಾಗುವುದು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ವಿಶ್ವದ ಅತೀ ದೊಡ್ಡ ಲಸಿಕಾ ಅಭಿಯಾನದಲ್ಲಿ ದೇಶದಾದ್ಯಂತ ಇದುವರೆಗೆ ಒಟ್ಟು 58.25 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಿ ಯುದ್ದೋಪಾದಿಯಲ್ಲಿ ಸರ್ಕಾರ ಕ್ರಮಕೈಗೊಂಡಿದೆ ಜನರು ಈ ಬಗ್ಗೆ ಸಹಕರಿಸಬೇಕೆಂದÀರು. ಮುಂದಿನ ದಿನಗಳಲ್ಲಿ ಕರೋನಾ ಮೂರನೆಯ ಅಲೆ ಬರುವ ಸಾಧ್ಯತೆಗೆ ಯಾರು ಹೆದರಬೇಕಾದ ಅಗತ್ಯವಿಲ್ಲ, ನಮ್ಮ ಜನಜೀವನ ನಮ್ಮ ಇರುವಿಕೆಯ ಮೇಲೆ ಮೂರನೆಯ ಅಲೆಯನ್ನು ತಡೆಯುವಲ್ಲಿ ಮಹತ್ವದ ಪಾತ್ರ ವಹಿಸಬೇಕೆಂದರು.

ಹುಣಶ್ಯಾಳ ಪಿ.ಜಿ ಗ್ರಾಮದ ನಿಜಗುಣಿದೇವರು ಮಹಾಸ್ವಾಮಿಗಳು, ಲೋಳಸೂರ ಗ್ರಾ.ಪಂ ಅಧ್ಯಕ್ಷೆ ಶಾಂತವ್ವ ಬಾಗಾಯಿ, ರಾಮಪ್ಪ ಬೆನಚನಮರಡಿ, ಸಿದ್ದಪ್ಪ ನಿಡಗುಂದಿ, ಯಮನಪ್ಪ ಬಾಗಾಯಿ, ಶಿವಕ್ಕ ಕುರಿ, ನಲ್ಲಾನಟ್ಟಿ ಗ್ರಾ. ಪಂ. ಅಧ್ಯಕ್ಷ ಸಿದ್ರಾಮ ಕುಳ್ಳೂರ, ಲಗಮಣ್ಣಾ ಕುಳ್ಳೂರ, ಮಾರುತಿ ಮೆಳವಂಕಿ, ಸುನೀಲ ಈರೇಶನವರ, ರಾಜು ಕೊಟಗಿ, ವಿಠ್ಠಲ ಸುಣಧೋಳಿ, ಅಲ್ಲಯ್ಯ ಪೂಜೇರಿ, ಹುಣಶ್ಯಾಳ ಪಿ.ಜಿ ಗ್ರಾ.ಪಂ ಅಧ್ಯಕ್ಷ ಸುನೀಲ ಪಾಶ್ಚಾಪೂರ, ಅಜೀತ ಪಾಟೀಲ, ಬಸವರಾಜ ಹುಡೇದ, ಪರಪ್ಪ ಗಿರೆಣ್ಣವರ, ಶ್ರೀಶೈಲ ತುಪ್ಪದ, ಗ್ರಾ. ಪಂ. ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕುಡಿಯುವ ನೀರು ವ್ಯತ್ಯಯ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ ರುದ್ರೇಶ ಘಾಳೆ

ಬೆಳಗಾವಿ - ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಲು ನಡೆಸಿದ ಮುಷ್ಕರದಿಂದಾಗಿ ಬೆಳಗಾವಿ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗಿದ್ದು ವಿಷಾದನೀಯವಾಗಿದೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿ...
- Advertisement -

More Articles Like This

- Advertisement -
close
error: Content is protected !!